Advertisement

ಭಗತ್ ಸಿಂಗ್ ಪಾತ್ರದ ಅಭ್ಯಾಸ ಮಾಡಲು ಹೋಗಿ ಜೀವ ಕಳೆದುಕೊಂಡ 7ನೇ ತರಗತಿ ಬಾಲಕ

01:58 PM Oct 30, 2022 | Team Udayavani |

ಚಿತ್ರದುರ್ಗ : ಕರ್ನಾಟಕ ರಾಜ್ಯೋತ್ಸವದ ದಿನದಂದು ಭಗತ್ ಸಿಂಗ್ ಪಾತ್ರ ನಿರ್ವಹಿಸಲು ಅಭ್ಯಾಸ ನಡೆಸುತ್ತಿದ್ದ ವೇಳೆ ಅವಘಡ ಸಂಭವಿಸಿ ಏಳನೇ ತರಗತಿಯ ಬಾಲಕ ಸಾವನ್ನಪ್ಪಿದ ಘಟನೆ ನಡೆದಿದೆ.

Advertisement

ಚಿತ್ರದುರ್ಗದ ಕೆಳಗೋಟೆ ಬಡಾವಣೆಯ ಸಂಜಯ್ ಗೌಡ(12) ಮೃತ ದುರ್ದೈವಿ.

ಸಂಜಯ್ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ದಿನದಂದು ಭಗತ್ ಸಿಂಗ್ ಪಾತ್ರ ನಿರ್ವಹಿಸಲು ನಿರ್ಧರಿಸಿದ್ದಾನೆ ಅದರಂತೆ ಶನಿವಾರ ಮನೆಯಲ್ಲಿ ಅಭ್ಯಾಸ ನಡೆಸುತ್ತಿದ್ದ ಎನ್ನಲಾಗಿದೆ.  ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ, ಮನೆಯೊಳಗೇ ಭಗತ್ ಸಿಂಗ್ ಅವರನ್ನು ಗಲ್ಲಿಗೇರಿಸುವ ಪಾತ್ರವನ್ನು ಅಭ್ಯಾಸ ಮಾಡಿಕೊಳ್ಳಲು ಮನೆಯ ಒಳಗಿದ್ದ ಫ್ಯಾನಿಗೆ ಹಗ್ಗ ಕಟ್ಟಿ ಮುಖಕ್ಕೆ ಉಲ್ಲನ್ ಟೋಪಿ ಹಾಕಿಕೊಂಡು ಮಂಚದ ಮೇಲಿಂದ ಜಿಗಿದಿದ್ದಾನೆ, ಈ ವೇಳೆ ಕುತ್ತಿಗೆಗೆ ಹಾಕಿದ ಹಗ್ಗ ಬಿಗಿದು ಬಿಡಿಸಲಾಗದೆ ಅಲ್ಲೇ ಸಾವನ್ನಪ್ಪಿದ್ದಾನೆ.

ಸಂಜೆ ವೇಳೆ ಪೋಷಕರು ಬಂದು ಬಾಗಿಲು ತೆರೆದಾಗ ಪ್ರಕರಣ ಬೆಳಕಿಗೆ ಬಂದಿದೆ ಕೂಡಲೇ ಹತ್ತಿರದ ಆಸ್ಪತ್ರೆಗೆ ಕೊಂಡೊಯ್ದರು ಯಾವುದೇ ಪ್ರಯೋಜನವಾಗಲಿಲ್ಲ.

ಸಂಜಯ್ ಗೌಡ, ಎಸ್ ಎಲ್ ವಿ ಶಾಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿಯಾಗಿದ್ದು ನಾಗರಾಜ್ ಮತ್ತು ಭಾಗ್ಯಲಕ್ಷ್ಮೀ ದಂಪತಿಯ ಪುತ್ರನಾಗಿದ್ದಾನೆ.

Advertisement

ಚಿತ್ರದುರ್ಗ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಹಿರಿಯ ನಟಿ ವಿನಯ ಪ್ರಸಾದ್ ಮನೆಯಲ್ಲಿ ಕಳ್ಳತನ : ಬೆಂಗಳೂರಿನಿಂದ ಉಡುಪಿಗೆ ಬಂದಿದ್ದ ವೇಳೆ ಘಟನೆ 

Advertisement

Udayavani is now on Telegram. Click here to join our channel and stay updated with the latest news.

Next