Advertisement

ಚಿತ್ರದುರ್ಗ: ಬಿಸಿಯೂಟ ಸೇವಿಸಿ 50 ವಿದ್ಯಾರ್ಥಿಗಳು ಅಸ್ವಸ್ಥ

09:49 AM Nov 06, 2019 | Team Udayavani |

ಚಿತ್ರದುರ್ಗ: ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಬಳಿಕ 50 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಚನ್ನಬಸಯ್ಯನಹಟ್ಟಿಯ ಸರ್ಕಾರಿ ಶಾಲೆಯಲ್ಲಿ ಮಂಗಳವಾರ ನಡೆದಿದೆ.

Advertisement

ಚಳ್ಳಕೆರೆ ತಾಲೂಕು ನಾಯಕನಹಟ್ಟಿ ಸಮೀಪದ ಚನ್ನಬಸಯ್ಯನಹಟ್ಟಿ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, ಅಸ್ವಸ್ಥ ವಿದ್ಯಾರ್ಥಿಗಳು ನಾಯಕಹಟ್ಟಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದಾರೆ.

ಆಸ್ಪತ್ರೆಯಲ್ಲಿ ಬೆಡ್ ಗಳ ಕೊರತೆ ಹಿನ್ನೆಲೆಯಲ್ಲಿ ನೆಲದ ಮೇಲೆ ಮಲಗಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಆರೋಗ್ಯ ಸಚಿವ ಶ್ರೀರಾಮುಲು ಪ್ರತಿನಿಧಿಸುವ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಶಾಲೆಯಲ್ಲಿ ಘಟನೆ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next