ಚಿತ್ರದುರ್ಗ: ಜಿಲ್ಲೆಯಲ್ಲಿ ಕಳೆದೆರಡು ತಿಂಗಳಿಂದ ಕಣ್ಣಿನ ಪರೀಕ್ಷೆಯ ಸಮೀಕ್ಷೆ ಮೂಲಕ ದೃಷ್ಟಿ ದೋಷ ಪತ್ತೆ ಹಚ್ಚುವ ಕಾರ್ಯ ಮಾಡಲಾಗುತ್ತಿದೆ. 9 ಸಾವಿರ ವಕ್ರೀಕಾರಕ ದೋಷವಿರುವ ಹಾಗೂ 9 ಸಾವಿರಕ್ಕೂ ಅ ಧಿಕ ಕಣ್ಣಿನ ಪೊರೆ ದೋಷವಿರುವ ಜನರನ್ನು ಪತ್ತೆ ಹಚ್ಚಲಾಗಿದೆ ಎಂದು ಡಿಎಚ್‌ಒ ಡಾ|ಆರ್.ರಂಗನಾಥ್ ಹೇಳಿದರು.
ನಗರದ ಜಿಲ್ಲಾ ಆಸ್ಪತ್ರೆಯ ಬಿ.ಸಿ.ರಾಯ್ ಸಭಾಂಗಣದಲ್ಲಿ ಗುರುವಾರ ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ “ವಿಶ್ವ ದೃಷ್ಟಿ ದಿನ’ ಕಣ್ಣುಗಳ ಆರೈಕೆ ತಪಾಸಣೆ ಕುರಿತು ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಗರದ ಜಿಲ್ಲಾ ಆಸ್ಪತ್ರೆ ಆವರಣದ ಬಿ.ಸಿ.ರಾಯ್ ಸಭಾಂಗಣದಲ್ಲಿ ಗುರುವಾರ ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದಡಿ “ವಿಶ್ವ ದೃಷ್ಟಿ ದಿನ’ ಕಣ್ಣುಗಳ ಆರೈಕೆ ತಪಾಸಣೆ ಕುರಿತು ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ತಪಾಸಣೆ ಮಾಡಿಸಿಕೊಂಡಿರುವವರಲ್ಲಿ 5 ಸಾವಿರ ಜನರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಇದೇ ರೀತಿ ಬೇರೆ ದೋಷಗಳನ್ನು ಕೂಡ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಜಿಲ್ಲಾಸ್ಪತ್ರೆ ನೇತ್ರ ತಜ್ಞ ಡಾ| ಕೃಷ್ಣಮೂರ್ತಿ ಮಾತನಾಡಿ, ನಮ್ಮ ವಿಶ್ವದಲ್ಲಿ ಸುಮಾರು 248 ಮಿಲಿಯನ್ ಜನ ದೃಷ್ಟಿದೋಷದಿಂದ ಬಳಲುತ್ತಿದ್ದಾರೆ. ಡಯಾಬಿಟಿಕ್ ರೆಟಿನೋಪತಿ ಮತ್ತು ಗ್ಲಾಕೋಮಾದಂತಹ ರೋಗಗಳನ್ನು ನಿಯಮಿತವಾಗಿ ಪರೀಕ್ಷಿಸುವ ಮೂಲಕ ನಮ್ಮ ದೃಷ್ಟಿಯನ್ನು ಸಂರಕ್ಷಿಕೊಳ್ಳಬಹುದು. ಹಾಗೆ ನಮ್ಮ ಕಣ್ಣುಗಳು ಚೆನ್ನಾಗಿರಬೇಕೆಂದರೆ ನಾವು ಸೇವಿಸುವ ಆಹಾರ ಕೂಡ ತುಂಬಾ ಮುಖ್ಯವಾಗುತ್ತದೆ. ಹಾಗಾಗಿ ಪೌಷ್ಟಿಕ ಆಹಾರ, ಹಸಿರು ತರಕಾರಿ ಮತ್ತು ಹಣ್ಣುಗಳನ್ನು ಹೆಚ್ಚಾಗಿ ಸೇವಿಸಬೇಕೆಂದು ಸಲಹೆ ನೀಡಿದರು.
40 ವರ್ಷ ಮೇಲ್ಪಟ್ಟವರು ತಮ್ಮ ಕಣ್ಣನ್ನು 6 ತಿಂಗಳು ಅಥವಾ 1 ವರ್ಷಕೊಮ್ಮೆ ತಪಾಸಣೆ ಮಾಡಿಸಿಕೊಳ್ಳಬೇಕು. ಹೀಗೆ ಕಾಲ ಕಾಲಕ್ಕೆ ತಪಾಸಣೆ ಮಾಡಿಸಿಕೊಂಡರೆ ಏನಾದರೂ ದೋಷಗಳಿದ್ದರೆ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಅಂಧತ್ವ ತಡೆಗಟ್ಟಬಹುದು ಎಂದು ತಿಳಿಸಿದರು. ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ಕಣ್ಣಿನ ಪೂರೆ ಶಸ್ತ್ರ ಚಿಕಿತ್ಸೆಯಲ್ಲಿ ಚಿತ್ರದುರ್ಗ ತಾಲೂಕಿನಲ್ಲಿ 1,741, ಚಳ್ಳಕೆರೆಯಲ್ಲಿ 716, ಹಿರಿಯೂರಿನಲ್ಲಿ 740, ಹೊಳಲ್ಕೆರೆಯಲ್ಲಿ 377,
ಹೊಸದುರ್ಗದಲ್ಲಿ 527, ಮೊಳಕಾಲ್ಮೂರಿನಲ್ಲಿ 949 ಜನರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಅಂಧತ್ವ ವಿಭಾಗದ ಕಾರ್ಯಕ್ರಮ ಅನುಷ್ಠಾನಾಧಿ ಕಾರಿ ಡಾ| ಆರ್.ರೂಪಾ ಮಾತನಾಡಿದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|ಬಸವರಾಜ್, ತಾಲೂಕು ಆರೋಗ್ಯಾಧಿಕಾರಿ ಡಾ|ಬಿ.ವಿ.ಗಿರೀಶ್, ಜಿಲ್ಲಾಸ್ಪತ್ರೆ ನೇತ್ರ ತಜ್ಞರಾದ ಡಾ| ಶಿಲ್ಪಾ, ಹೊಳಲ್ಕೆರೆ ಸಾರ್ವಜನಿಕ ಆಸ್ಪತ್ರೆಯ ನೇತ್ರ ತಜ್ಞರಾದ ಡಾ| ಮಂಜುನಾಥ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್, ನೇತ್ರಾಧಿಕಾರಿ ರಾಮು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ ಇದ್ದರು.