Advertisement

ಅಂಬೇಡ್ಕರ್‌ ಜನ್ಮ ದಿನಾಚರಣೆ

05:06 PM Apr 15, 2020 | Naveen |

ಚಿತ್ರದುರ್ಗ: ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ 129ನೇ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆಯಿಂದ ಮಂಗಳವಾರ ಸರಳವಾಗಿ ಆಚರಿಸಲಾಯಿತು.

Advertisement

ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿ ಗೌರವ ಅರ್ಪಿಸಿದರು. ಕೋವಿಡ್‌-19 ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಎಲ್ಲೆಡೆ ಲಾಕ್‌ಡೌನ್‌ ಜಾರಿಯಲ್ಲಿದ್ದು, ಹೀಗಾಗಿ ಡಾ. ಅಂಬೇಡ್ಕರ್‌ ಅವರ ಜಯಂತಿ ಜಿಲ್ಲಾಡಳಿತ ಸರಳವಾಗಿ ಆಯೋಜಿಸಿತ್ತು. ಶಾಸಕ ಜಿ.ಎಚ್‌ .ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ಆರ್‌.ವಿನೋತ್‌ ಪ್ರಿಯಾ, ಜಿಪಂ ಸಿಇಒ ಹೊನ್ನಾಂಬ, ಎಸ್ಪಿ ಜಿ.ರಾಧಿ ಕಾ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಂಜುಳಮ್ಮ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next