Advertisement

ರಸ್ತೆ ದಾಟುತ್ತಿದ್ದ ಯುವತಿಗೆ ಅಂಬ್ಯುಲೆನ್ಸ್ ಡಿಕ್ಕಿ ಯುವತಿ ಸಾವು

09:57 AM Nov 12, 2019 | sudhir |

ಚಿತ್ರದುರ್ಗ: ರಸ್ತೆ ದಾಟುತ್ತಿದ್ದ ಯುವತಿಗೆ ಅಂಬ್ಯುಲೆನ್ಸ್ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿಂಗಾಪುರ ಕಾವಲಹಟ್ಟಿ ಬಳಿ ನಡೆದಿದೆ.

Advertisement

ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಸೋಮವಾರ ರಾತ್ರಿ ವೇಗವಾಗಿ ಬಂದ ಅಂಬ್ಯುಲೆನ್ಸ್ ರಸ್ತೆ ದಾಟುತ್ತಿದ್ದ ಯುವತಿಗೆ ಡಿಕ್ಕಿಯಾಗಿದೆ.

ಡಿಕ್ಕಿಯಾದ ರಭಸಕ್ಕೆ ಸಿಂಗಾಪುರ ಕಾವಲಹಟ್ಟಿ ಗ್ರಾಮದ ಪಲ್ಲವಿ(18) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಂಬ್ಯುಲೆನ್ಸ್ ಚಾಲಕನ ನಿರ್ಲಕ್ಷ್ಯ ಖಂಡಿಸಿ ಮೃತ ಪಲ್ಲವಿ ಸಂಬಂಧಿಕರು ಹಾಗೂ ಗ್ರಾಮಸ್ಥರು ಆಸ್ಪತ್ರೆ ಎದುರು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.

ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next