Advertisement

ಮತ ಮಾರಾಟದಿಂದ ಸಂವಿಧಾನಕ್ಕೆ ಧಕ್ಕೆ

12:35 PM Aug 25, 2019 | Naveen |

ಚಿತ್ರದುರ್ಗ: ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ ಮತದಾನದ ಅಸ್ತ್ರವನ್ನು ದೇಶದ ಜನರಿಗೆ ಕೊಟ್ಟಿದ್ದಾರೆ. ಆದರೆ ಅದನ್ನು ಮಾರಿಕೊಳ್ಳುತ್ತಿರುವುದರಿಂದ ಸಂವಿಧಾನ ಇನ್ನೂ ಸರಿಯಾಗಿ ಜಾರಿಗೆ ಬಂದಿಲ್ಲ ಎಂದು ಬಿಎಸ್‌ಪಿ ರಾಜ್ಯ ಉಪಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಬೇಸರ ವ್ಯಕ್ತಪಡಿಸಿದರು.

Advertisement

ಬಹುಜನ ಸಮಾಜವಾದಿ ಪಕ್ಷದ ಜಿಲ್ಲಾ ಘಟಕದ ವತಿಯಿಂದ ಶನಿವಾರ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಯ ಎಲ್ಲಾ ತಾಲೂಕಿನ ಸೆಕ್ಟರ್‌ ಬೂತ್‌ ಮಟ್ಟದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮತ ಹಾಕುವ ವೇಳೆ ನಾವು ಸೀರೆ, ಕುಪ್ಪಸ, ಹಣ, ಹೆಂಡಕ್ಕೆ ನಮ್ಮ ಮತವನ್ನು ಮಾರಿಕೊಳ್ಳುತ್ತೇವೆ. ಇದರಿಂದಾಗಿ ಇಂದು ದಲಿತರ ಮೇಲೆ ದೌರ್ಜನ್ಯ, ಜಾತಿ ನಿಂದನೆ, ಅತ್ಯಾಚಾರ, ಕೊಲೆ ಪ್ರಕರಣಗಳು ನಿಂತಿಲ್ಲ ಎಂದರು.

ದೇಶದಲ್ಲಿರುವ ಪ್ರತಿಯೊಬ್ಬರಿಗೂ ಭೂಮಿ, ಆಸ್ತಿ, ಸಂಪತ್ತು ಅಧಿಕಾರ ಸಮಾನವಾಗಿ ಹಂಚಿಕೆಯಾಗಬೇಕು ಎಂಬ ಕಾರಣಕ್ಕೆ ಅಂಬೇಡ್ಕರ್‌ ಹೋರಾಟ ನಡೆಸಿದ್ದರು. ಇದರ ಫಲವಾಗಿ ಇಂದು ಎಲ್ಲಾ ಜಾತಿಯವರು ಮುಖ್ಯಮಂತ್ರಿ, ಪ್ರಧಾನ ಮಂತ್ರಿಗಳಾಗಿದ್ದಾರೆ. ಶಿಕ್ಷಣ, ಸಂಘಟನೆ ಹೋರಾಟದ ಮೂಲಕ ನಿಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು. ಜಾತಿ, ಕೋಮುಗಲಭೆ, ಪ್ರಾಂತೀಯ ಗಲಭೆಗಳು ಎಲ್ಲಿಯೂ ಆಗಬಾರದು. ಆದರೆ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಮೇಲೆ ನಿರಂತರ ದಬ್ಟಾಳಿಕೆ ದೌರ್ಜನ್ಯ ನಡೆಸುತ್ತಿರುವುದು ನಿಂತಿಲ್ಲ. ಇದಕ್ಕೆ ನಿಮ್ಮಲ್ಲಿರುವ ಕೀಳರಿಮೆಯೇ ಕಾರಣ ಎಂದು ಎಚ್ಚರಿಸಿದರು.

ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಬಸವರಾಜ್‌, ಡಾ| ಕೃಷ್ಣಮೂರ್ತಿ, ರಾಜ್ಯ ಕಾರ್ಯದರ್ಶಿ ಎನ್‌. ಪ್ರಕಾಶ್‌, ಜಿಲ್ಲಾಧ್ಯಕ್ಷ ಎಸ್‌. ವೆಂಕಟೇಶ್‌ ಐಹೊಳೆ, ಉಪಾಧ್ಯಕ್ಷ ಮಹಾಂತೇಶ್‌, ಪ್ರಧಾನ ಕಾರ್ಯದರ್ಶಿ ಗಿರೀಶ್‌, ಜಿಲ್ಲಾ ಕಾರ್ಯದರ್ಶಿಗಳಾದ ಕೆ.ಎನ್‌. ದೊಡ್ಡೊಟ್ಟೆಪ್ಪ, ಕೆ. ತಿಮ್ಮಪ್ಪ, ಟಿ. ರುದ್ರಮುನಿ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next