Advertisement

Protest: ಭದ್ರಾ ಮೇಲ್ದಂಡೆ ಯೋಜನೆ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಚಿತ್ರದುರ್ಗ ನಗರ ಬಂದ್

10:00 AM Jan 23, 2024 | Team Udayavani |

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲಾ ನೀರಾವರಿ ಅನುಷ್ಠಾನ ಸಮಿತಿ ನೇತೃತ್ವದಲ್ಲಿ ಚಿತ್ರದುರ್ಗ ನಗರ ಬಂದ್ ಕರೆ ಕೊಡಲಾಗಿದೆ.

Advertisement

ಕಳೆದ 25 ವರ್ಷಗಳಿಂದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಕುಂಟುತ್ತಾ ಸಾಗುತ್ತಿದೆ. ರಾಜ್ಯದ ಯಾವುದೇ ನೀರಾವರಿ ಯೋಜನೆ ಇಷ್ಟು ಸುಧೀರ್ಘ ಸಮಯ ತೆಗೆದುಕೊಂಡಿಲ್ಲ. ಸುಳ್ಳಿನ ರಾಜಕಾರಣ, ರಾಜಕೀಯ ಇಚ್ಚಾಶಕ್ತಿ ಕೊರತೆಯಿಂದ ಯೋಜನೆ ಸಾಕಾರವಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮುಂದಿನ ಬಜೆಟ್ ನಲ್ಲಿ ನೀರಾವರಿ ಯೋಜನೆ ಪೂರ್ಣಗೊಳಿಸಲು ಸರ್ಕಾರ ಅನುದಾನ ಮೀಸಲಿಡಬೇಕು ಎಂದು ರೈತರಿಂದ ಒತ್ತಾಯಿಸಿದ್ದಾರೆ.

ಸದ್ಯ ಚಿತ್ರದುರ್ಗ ಬಂದ್ ಕರೆಗೆ 20ಕ್ಕೂ ಹೆಚ್ಚು ಸಂಘಟನೆಗಳು ಬೆಂಬಕ ವ್ಯಕ್ತಪಡಿಸಿದ್ದು, ಕೆಲ ಖಾಸಗಿ ಶಾಲೆಗಳು ಮುಚ್ಚಿವೆ. ಸರ್ಕಾರಿ ಶಾಲೆ,‌ ಕಾಲೇಜುಗಳಿಗೆ ರಜೆ ಘೋಷಣೆ ಆಗಿಲ್ಲ.

ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಆಗಿವೆ. ಮುಖ್ಯ ರಸ್ತೆಯಲ್ಲಿ ಸಂಚಾರ ವಿರಳವಾಗಿದೆ. ಗಾಂಧಿ ವೃತ್ತ, ಪ್ರವಾಸಿ ಮಂದಿರದ ವೃತ್ತಗಳಲ್ಲಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.

Advertisement

ಇದನ್ನೂ ಓದಿ: Cheetah Cubs: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 3 ಮರಿಗಳಿಗೆ ಜನ್ಮ ನೀಡಿದ ಚೀತಾ ಜ್ವಾಲಾ

Advertisement

Udayavani is now on Telegram. Click here to join our channel and stay updated with the latest news.

Next