ಚಿತ್ರದುರ್ಗ: ಇಟ್ಟಿಗೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ; ಇಬ್ಬರು ಕಾರ್ಮಿಕರು ಸಾವು
08:31 AM Dec 13, 2020 | Mithun PG |
ಚಿತ್ರದುರ್ಗ: ಇಟ್ಟಿಗೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಚಳ್ಳಕೆರೆ ತಾಲೂಕಿನ ರೇಖಲಗೆರೆ ಬಳಿ ಬೆಳಗಿನ ಜಾವ ನಡೆದಿದೆ.
Advertisement
ಮೃತ ಕಾರ್ಮಿಕರನ್ನು ಮೊಳಕಾಲ್ಮೂರು ಮೂಲದ ಬಸಣ್ಣ(23), ಶಶಿಕುಮಾರ್ (25) ಎಂದು ಗುರುತಿಸಲಾಗಿದೆ.
ಮತ್ತೋರ್ವ ಕಾರ್ಮಿಕ ಗಾಯಗೊಂಡಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ನಾಯಕನಹಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.