ಚಿತ್ರದುರ್ಗ: ಕಾರು ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು, ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಪಟ್ರಹಳ್ಳಿ ಗ್ರಾಮದಲ್ಲಿ ನಡೆದಿದೆ.
Advertisement
ಕಾರ್‌ನಲ್ಲಿದ್ದ ಶಹಾಪುರ ಮೂಲದ ಮಲ್ಲಿನಾಥ್(23) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಯಾದಗಿರಿ ಜಿಲ್ಲೆ ಶಹಾಪುರದಿಂದ ಬೆಂಗಳೂರಿಗೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಗಾಯಗೊಂಡ ಮೂವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಹಿರಿಯೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.