Advertisement

ಚಿತ್ರದುರ್ಗ ಜಿಲ್ಲೆಯಲ್ಲಿ 263 ಜನರಿಗೆ ಕೋವಿಡ್ ಪಾಸಿಟಿವ್! 440 ಮಂದಿ ಗುಣಮುಖ

07:00 PM Oct 13, 2020 | sudhir |

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 263 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,122ಕ್ಕೆ ಏರಿಕೆಯಾಗಿದೆ.

Advertisement

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಮಂಗಳವಾರ 440 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಮಂಗಳವಾರ ಒಟ್ಟು 1805 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 263 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 10,122ಕ್ಕೆ ಏರಿಕೆಯಾಗಿದ್ದು, ಇದುವರೆಗೆ 45 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 8,856 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,174 ಸಕ್ರಿಯ ಪ್ರಕರಣಗಳು ಇವೆ.

ಇದನ್ನೂ ಓದಿ:ಗಡಿಯಲ್ಲಿ ಭಾರತದ 44 ಸೇತುವೆ ಉದ್ಘಾಟನೆಗೊಂಡ ಬೆನ್ನಲ್ಲೇ ಚೀನಾ ಆಕ್ರೋಶ ವ್ಯಕ್ತಪಡಿಸಿದ್ದೇಕೆ?

ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 77,306 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 80,537 ಜನರ ಮಾದರಿ ಸಂಗ್ರಹಿಸಲಾಗಿದ್ದು, 69,718 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 210 ಜನರ ವರದಿ ಬರುವುದು ಬಾಕಿ ಇದೆ. 487 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next