Advertisement

ಚಿತ್ರದುರ್ಗ ಜಿಲ್ಲೆಯಲ್ಲಿ 84 ಜನರಿಗೆ ಕೋವಿಡ್ ಸೋಂಕು ದೃಢ! 111 ಸೋಂಕಿತರು ಗುಣಮುಖ

07:02 PM Oct 25, 2020 | sudhir |

ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 84 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11,892ಕ್ಕೆ ಏರಿಕೆಯಾಗಿದೆ.

Advertisement

ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಭಾನುವಾರ 111 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಭಾನುವಾರ ಒಟ್ಟು 1700 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ.  ವರದಿಯಲ್ಲಿ 84 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 11,892ಕ್ಕೆ ಏರಿಕೆಯಾಗಿದ್ದು, ಇದುವರೆಗೆ 56 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 11,120 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 715 ಸಕ್ರಿಯ ಪ್ರಕರಣಗಳು ಇವೆ.

ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 90,810 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.

ಈವರೆಗೆ 1,00,363 ಜನರ ಮಾದರಿ ಸಂಗ್ರಹಿಸಲಾಗಿದ್ದು, 87,179 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 812 ಜನರ ವರದಿ ಬರುವುದು ಬಾಕಿ ಇದೆ. 489 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next