ಚಿತ್ರದುರ್ಗ:ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 207 ಜನರಿಗೆ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9,859ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಸೋಮವಾರ 239 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಸೋಮವಾರ ಒಟ್ಟು 923 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 207 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 9,859ಕ್ಕೆ ಏರಿಕೆಯಾಗಿದ್ದು, ಇದುವರೆಗೆ 45 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 8,416 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 1,351 ಸಕ್ರಿಯ ಪ್ರಕರಣಗಳು ಇವೆ.
ಇದನ್ನೂ ಓದಿ:ಕಲ್ಲಿನ ಕೋಟೆಯ ಬೋರುಗುಡ್ಡೆ ಅಗೆದು ಕೃಷಿ ಮಾಡಿ ಯಶಸ್ಸು ಸಾಧಿಸಿದ ಆದರ್ಶ ಶಿಕ್ಷಕ
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 77,306 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 78,732 ಜನರ ಮಾದರಿ ಸಂಗ್ರಹಿಸಲಾಗಿದ್ದು, 68,333 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 54 ಜನರ ವರದಿ ಬರುವುದು ಬಾಕಿ ಇದೆ. 486 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿರಂಗನಾಥ್ ತಿಳಿಸಿದ್ದಾರೆ.