ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ 153 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
Advertisement
ಬುಧವಾರ ಒಟ್ಟು 1,155 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 164 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 8,110ಕ್ಕೆ ಏರಿಕೆಯಾಗಿದ್ದು, ಇದುವರೆಗೆ 37 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 7,958 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 645 ಸಕ್ರಿಯ ಪ್ರಕರಣಗಳು ಇವೆ.
ಈವರೆಗೆ 72,132 ಜನರ ಮಾದರಿ ಸಂಗ್ರಹಿಸಲಾಗಿದ್ದು, 63,399 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 152 ಜನರ ವರದಿ ಬರುವುದು ಬಾಕಿ ಇದೆ. 471 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ತಿಳಿಸಿದ್ದಾರೆ.