Advertisement

ಮೌಲ್ಯಮಾಪನ ಕೇಂದ್ರ ಆರಂಭಿಸಲು ಮನವಿ

04:44 PM Jun 05, 2020 | Naveen |

ಚಿತ್ರದುರ್ಗ: ರಾಜ್ಯದಲ್ಲಿ ಕೋವಿಡ್‌-19 ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರೀಕೃತ ಮೌಲ್ಯಮಾಪನದ ಬದಲಾಗಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಗಣಿತ ವಿಷಯದ ಮೌಲ್ಯಮಾಪನ ಕೇಂದ್ರಗಳನ್ನು ಆರಂಭಿಸಬೇಕೆಂದು ಚಿತ್ರದುರ್ಗ ಜಿಲ್ಲಾ ಪಪೂ ಗಣಿತ ಶಾಸ್ತ್ರ ಉಪನ್ಯಾಸಕರ ವೇದಿಕೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಒತ್ತಾಯಿಸಿದೆ.

Advertisement

ಉಪನ್ಯಾಸಕರು ಮೌಲ್ಯಮಾಪನ ಮಾಡಲು ಉತ್ಸುಕರಾಗಿದ್ದಾರೆ. ಆದರೆ ಮೌಲ್ಯಮಾಪನಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಉಪನ್ಯಾಸಕರು ಬೆಂಗಳೂರಿಗೆ ಬರುವ ಕಾರಣ ಊಟ, ವಸತಿ ಹಾಗೂ ಸುರಕ್ಷತೆಯ ಸಮಸ್ಯೆ ಹೆಚ್ಚಾಗಲಿದೆ. ಇದರ ನಡುವೆ ಮೌಲ್ಯಮಾಪನ ಕಾರ್ಯದಲ್ಲಿ ನಿರತರಾಗುವ ಉಪನ್ಯಾಸಕರು ಕೋವಿಡ್‌-19 ಆತಂಕಕ್ಕೆ ಒಳಗಾಗುವುದರಿಂದ ಮೌಲ್ಯಮಾಪನ ವಿಳಂಬವಾಗುವ ಸಾಧ್ಯತೆ ಇದೆ. ಜಿಲ್ಲಾ ಮಟ್ಟದಲ್ಲೇ ಮೌಲ್ಯಮಾಪನ ಮಾಡಲು ಅವಕಾಶ ಕಲ್ಪಿಸಿದರೆ ಸಾಮಾಜಿಕ ಅಂತರ ಕಾಯ್ದುಕೊಂಡು ಊಟ, ವಸತಿ ಸಮಸ್ಯೆ ನಿವಾರಣೆ ಮಾಡಿಕೊಳ್ಳಬಹುದು. ಈ ನಿಟ್ಟಿನಲ್ಲಿ ಸರ್ಕಾರ ಗಮನಹರಿಸಬೇಕು ಎಂದು ಒತ್ತಾಯಿಸಿ ಪಿಯುಡಿಡಿ ಶೋಭಾ ಅವರಿಗೆ ಮನವಿ ಸಲ್ಲಿಸಿದರು.

ವೇದಿಕೆ ಜಿಲ್ಲಾಧ್ಯಕ್ಷ ಪಿ.ಎಂ.ಜಿ.ರಾಜೇಶ್‌, ಕಾರ್ಯದರ್ಶಿ ಪಿ.ಲೋಕೇಶ್‌, ಖಜಾಂಚಿ ಸಿ.ಕೃಷ್ಣಮೂರ್ತಿ, ಗೌರವಾಧ್ಯಕ್ಷರಾದ ಡಿ.ಮಹಮದ್‌ ಗೌಸ್‌ಪೀರ್‌, ವಸಂತ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next