Advertisement

31ರಿಂದ ಮೂರು ದಿನ-ಪುಷ್ಪ ಪ್ರದರ್ಶನ ಆಯೋಜನೆ

01:34 PM Jan 29, 2020 | Naveen |

ಚಿತ್ರದುರ್ಗ: ತೋಟಗಾರಿಕೆ ಇಲಾಖೆ ಕಚೇರಿ ಆವರಣದಲ್ಲಿ ಜ. 31 ರಿಂದ ಫೆ. 2 ರವರೆಗೆ 29ನೇ ಫಲ-ಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿ ಕಾರಿ ಸಿ. ಸತ್ಯಭಾಮ ತಿಳಿಸಿದರು.

Advertisement

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೋಟಗಾರಿಕೆ ಇಲಾಖೆ, ಜಿಪಂ, ಜಿಲ್ಲಾ ತೋಟಗಾರಿಕೆ ಸಂಘ ಹಾಗೂ ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಫಲ-ಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಜ. 31 ರಂದು ಸಂಜೆ 6 ಗಂಟೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ಶ್ರೀರಾಮುಲು ಫಲ-ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಚಂದ್ರಯಾನ -3ರ ಮಾದರಿ ಈ ಬಾರಿಯ ವಿಶೇಷ. ವಿವಿಧ ಜಾತಿಯ ಹೂಗಳು, ಹಣ್ಣುಗಳು, ತರಕಾರಿಗಳು ಮತ್ತು ಹಲವು ವಿಶೇಷ ಬಗೆಯ ಅಲಂಕಾರಿಕ ಗಿಡಗಳನ್ನು ಬೆಳೆಸಿ ಪ್ರದರ್ಶಿಸಲಾಗುತ್ತಿದೆ. ಫಲ-ಪುಷ್ಪ ಪ್ರದರ್ಶನದಲ್ಲಿ ಹೂವಿನ ಗಿಡಗಳ ಬೃಹತ್‌ ಪ್ರದರ್ಶನ, ಇಕೆಬಾನ, ಕುಬj ಮರ ಗಿಡಗಳು, ತರಕಾರಿ ಕೆತ್ತನೆ, ಅಲಂಕಾರಿಕ ಗಿಡಗಳ ಜೋಡಣೆ ಹಾಗೂ ಜಿಲ್ಲೆಯ ರೈತರು ಬೆಳೆದಿರುವ ಹಣ್ಣು ಮತ್ತು ತರಕಾರಿಗಳ ಪ್ರದರ್ಶನ ಏರ್ಪಡಿಸಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು ಎಂದು ಹೇಳಿದರು.

ಚಂದ್ರಯಾನ-3 ವಿಫಲವಾಗಲು ಸಾಧ್ಯವಿಲ್ಲ ಎಂಬ ಕಲಾಕೃತಿ ಇದ್ದು, ಈ ಮೂಲಕ ವಿಜ್ಞಾನಿಗಳಿಗೆ ಸ್ಫೂರ್ತಿ ತುಂಬುವ ಪ್ರಯತ್ನ ಮಾಡಲಾಗಿದೆ. ಕೋಟೆಯಲ್ಲಿರುವ ಒಂಟಿಕಲ್ಲು ಬಸವಣ್ಣ, ಒನಕೆ ಓಬವ್ವ, ಹೆಣ್ಣು ಭ್ರೂಣಹತ್ಯೆ ಮಹಾಪಾಪ, ತರಾಸು ಕಲಾಕೃತಿಗಳು ಪ್ರದರ್ಶನದಲ್ಲಿ ಇರಲಿವೆ ಎಂದರು.

ರೈತರು ಅಳವಡಿಕೆ ಮಾಡಿಕೊಳ್ಳಬೇಕಾದ ತೋಟಗಾರಿಕೆ ಕ್ಷೇತ್ರದ ಮಾದರಿ, ಬಹು ಬೆಳೆ ಪದ್ಧತಿ, ನೀರಿನ ಮಿತ ಬಳಕೆ, ಪ್ರೊಸೆಸಿಂಗ್‌ ಯುನಿಟ್‌, ರಫು¤ ಮಾಡುವ ಬಗ್ಗೆ ತಿಳಿವಳಿಕೆ ನೀಡಲು ಮಾದರಿ ಕ್ಷೇತ್ರದ ವ್ಯವಸ್ಥೆ ಮಾಡಲಾಗಿದೆ. ವಿವಿಧ ಜಾತಿಯ ಸುಮಾರು 25 ಜಾತಿಯ ಔಷಧೀಯ ಗಿಡಗಳ ಪ್ರದರ್ಶನ, ಜಿಲ್ಲೆಯ ರೈತರು ಬೆಳೆದಿರುವ ತೋಟಗಾರಿಕೆ ಉತ್ಪನ್ನಗಳ ಪ್ರದರ್ಶನ, ಹಣ್ಣು ಮತ್ತು ತರಕಾರಿ ಕೆತ್ತನೆಯಲ್ಲಿ ಅರಳಿರುವ ಕಲಾಕೃತಿಗಳು, ವಿವಿಧ ಇಲಾಖೆಗಳಿಂದ ವಸ್ತು ಪ್ರದರ್ಶನ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದ್ದು, ಮಹಿಳೆಯರು ಜ. 31 ರಂದು ಬೆಳಿಗ್ಗೆ 11 ಗಂಟೆಗೆ ಫಲ-ಪುಷ್ಪ ಪ್ರದರ್ಶನದಲ್ಲಿ ಸಾರ್ವಜನಿಕರಿಗೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ತರಕಾರಿ ಕೆತ್ತನೆ ಹಾಗೂ ಹೂವುಗಳ ಜೋಡಣೆ, ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ. ರಂಗೋಲಿ ಹಾಕಲು ಹಣ್ಣು, ತರಕಾರಿ, ಹೂಗಳು, ಕಾಳುಗಳನ್ನು ಮಾತ್ರ ಉಪಯೋಗಿಸಬೇಕು ಎಂದು ವಿವರಿಸಿದರು.

Advertisement

ಫೆ.1 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ 1 ರಿಂದ 10ನೇ ತರಗತಿಯ ಶಾಲಾ ವಿದ್ಯಾರ್ಥಿಗಳಿಗಾಗಿ ಹಣ್ಣು ಮತ್ತು ತರಕಾರಿಗಳನ್ನು ಗುರುತಿಸುವ ಸ್ಪರ್ಧೆ,
ಹೂವು-ಹಣ್ಣು, ಮತ್ತು ಸೊಪ್ಪು ತರಕಾರಿಗಳನ್ನು ಬಳಸಿ ಫ್ಯಾನ್ಸಿ ಡ್ರೆಸ್‌, ಚಿತ್ರಕಲಾ ಸ್ಪರ್ಧೆ, ಆಶುಭಾಷಣ, ಪ್ರಬಂಧ ಸ್ಪರ್ಧೆ, ಜಾನಪದ ಮತ್ತು ಭಾವಗೀತೆ ಸ್ಪರ್ಧೆ ಏರ್ಪಡಿಸಲಾಗಿದೆ. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ನಗದು ಬಹುಮಾನ ಹಾಗೂ ಪ್ರಮಾಣಪತ್ರ ನೀಡಲಾಗುವುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಜಿ. ಸವಿತಾ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ (ರಾಜ್ಯ ವಲಯ) ಬಿ. ದೇವರಾಜು, ಜಿಲ್ಲಾ ತೋಟಗಾರಿಕೆ ಸಂಘದ ಉಪಾಧ್ಯಕ್ಷರಾದ ಎ.ಎಸ್‌. ಲೋಕನಾಥ್‌, ಎಂ.ವಿ. ವೀಣಾ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next