Advertisement
ಹಿಂದೂ ಎನ್ನುವುದು ಧರ್ಮವೇ ಅಲ್ಲ. ಅದು ಅನೈತಿಕ-ಅನಾಚಾರಗಳನ್ನು ಒಳಗೊಂಡಿದೆ. ಲಿಂಗಾಯತ ಸ್ವತಂತ್ರ ಧರ್ಮ ಎಂದು ಸಿರಿಗೆರೆ ತರಳಬಾಳು ಶಾಖಾಮಠ ಸಾಣೇಹಳ್ಳಿಯ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರೆ, ಹಿಂದೂ ಇಲ್ಲ ಅಂದರೆ ಲಿಂಗಾಯತ ಇಲ್ಲವೇ ಇಲ್ಲ ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಸ್ವಾಮೀಜಿ ತಿರುಗೇಟು ನೀಡಿದರು.
ಇದೇ ಸಮಾರಂಭದ ವೇದಿಕೆಯಲ್ಲಿದ್ದ ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ವಚನಾನಂದ ಸ್ವಾಮೀಜಿ, ಸಾಣೇಹಳ್ಳಿ ಶ್ರೀಗಳ ಹೇಳಿಕೆಯನ್ನು ಖಂಡಿಸಿದರು. ಹಿಂದೂ ಧರ್ಮ ವಿಶಾಲವಾದ ಧರ್ಮ. ಎಲ್ಲ ಧರ್ಮಗಳ ಮೂಲ ಪರಂಪರೆ. ವೀರಶೈವ, ಲಿಂಗಾಯತ, ಜೈನ, ಬುದ್ಧ ಧರ್ಮದ ಮೂಲ ಬೇರು ಹಿಂದೂ ಧರ್ಮವೇ. ಹಾಗಾಗಿ ನಾವೆಲ್ಲರೂ ಹಿಂದೂ ಧರ್ಮದ ಮೂಲವನ್ನು ಒಪ್ಪಿಕೊಳ್ಳಬೇಕಾಗುತ್ತದೆ ಎಂದರು.