Advertisement

ಸೋಂಕು ನಿವಾರಕ ಮಾರ್ಗಕ್ಕೆ ಚಾಲನೆ

11:24 AM Apr 10, 2020 | Naveen |

ಚಿತ್ರದುರ್ಗ: ನಗರದಲ್ಲಿ ಹೆಚ್ಚು ಜನ ಸೇರುವ ಜಾಗಗಳನ್ನು ಗುರುತಿಸಿ ಸೋಂಕು ನಿವಾರಕ ಮಾರ್ಗಗಳನ್ನು ನಿರ್ಮಿಸುತ್ತಿದ್ದು, ಈಗ ಎರಡು ಮಾರ್ಗಗಳು ಕಾರ್ಯನಿರ್ವಹಿಸುತ್ತಿವೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಹೇಳಿದರು.

Advertisement

ಜಿಲ್ಲಾಡಳಿತ ಮತ್ತು ನಗರಸಭೆ ವತಿಯಿಂದ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಸಿದ್ಧಪಡಿಸಿರುವ ಸೋಂಕು ನಿವಾರಕ ಮಾರ್ಗಕ್ಕೆ ಗುರುವಾರ ಚಾಲನೆ ನೀಡಿ ಮಾತನಾಡಿದರು. ಕೋವಿಡ್‌-19 ವೈರಸ್‌ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ತಮಿಳುನಾಡು ಹಾಗೂ ಮೈಸೂರುಗಳಲ್ಲಿ ಮಾಡಿರುವ ಪ್ರಯೋಗವನ್ನು ಚಿತ್ರದುರ್ಗ ಜಿಲ್ಲೆಯಲ್ಲೂ ಮಾಡಿದ್ದು, ನಗರಸಭೆಯ ಇಂಜಿನಿಯರಗಳೇ ಸೇರಿ ಅತ್ಯಂತ ಕಡಿಮೆ ವೆಚ್ಚದಲ್ಲಿ ಈ ಮಾರ್ಗ ನಿರ್ಮಿಸಿದ್ದಾರೆ ಎಂದರು.

ಈಗಾಗಲೇ ನಗರದ ಮುರುಘರಾಜೇಂದ್ರ ಮೈದಾನದಲ್ಲಿ ಸ್ಟೆ çನ್‌ಲೆಸ್‌ ಸ್ಟೀಲ್‌ ಬಳಸಿ 87 ಸಾವಿರ ವೆಚ್ಚದಲ್ಲಿ ಸೋಂಕು ನಿವಾರಕ ಮಾರ್ಗ ರಚಿಸಲಾಗಿತ್ತು. ಈಗ ಪ್ಲಾಸ್ಟಿಕ್‌ ಪೈಪ್‌ಗ್ಳನ್ನು ಬಳಸಿಕೊಂಡು 5 ಸಾವಿರ ವೆಚ್ಚದಲ್ಲೇ ಮತ್ತೂಂದು ಮಾರ್ಗವನ್ನು ಇಂಜಿನಿಯರುಗಳು ಸಿದ್ಧಪಡಿಸಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಆಸ್ಪತ್ರೆಯಲ್ಲೂ ಎರಡು ಸೋಂಕು ನಿವಾರಕ ಮಾರ್ಗ ಮಾಡಿಕೊಡಲು ಬೇಡಿಕೆ ಇದೆ. ಈ ಬಗ್ಗೆ ನಗರಸಭೆಯೊಂದಿಗೆ ಚರ್ಚಿಸಿದ್ದೇನೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾ ವೈರಸ್‌ ಪಾಸಿಟಿವ್‌ ಪ್ರಕರಣ ಪತ್ತೆಯಾಗಿಲ್ಲ. ಆದರೂ ಸಾರ್ವಜನಿಕರು ಸೋಂಕು ಹರಡದಂತೆ ತಡೆಯಲು ಕಡ್ಡಾಯವಾಗಿ ಮನೆಯಲ್ಲೇ ಇರಬೇಕು. ಹೊರಗೆ ಬಂದರೂ ಸಾಮಾಜಿಕ ಅಂತರದ ಕಡೆ ಗಮನ ಇರಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಆರ್‌.ವಿನೋತ್‌ ಪ್ರಿಯಾ ಮಾತನಾಡಿ, ಕೋವಿಡ್‌-19 ಸಂಬಂಧಪಟ್ಟಂತೆ ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ಸೋಂಕು ಪತ್ತೆಯಾಗಿಲ್ಲ. ಆದಾಗ್ಯೂ ಮುಂಜಾಗ್ರತಾ ಕ್ರಮವಾಗಿ ಸೋಂಕು ನಿವಾರಕ ಮಾರ್ಗ ಮಾಡಲಾಗಿದೆ. ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡುತ್ತಿದ್ದಾರೆ. ಅಗತ್ಯ ವಸ್ತುಗಳ ಖರೀದಿಗಾಗಿ ಕೆಲವರು ಮಾತ್ರ ಹೊರಗಡೆ ಬರುತ್ತಿದ್ದಾರೆ. ಸಾರ್ವಜನಿಕರು ಆದಷ್ಟು ಮನೆಯಲ್ಲಿ ಇರುವುದು ಉತ್ತಮ ಎಂದು ಹೇಳಿದರು. ಗ್ರಾಮೀಣ ಮತ್ತು ನಗರದ ಪ್ರದೇಶದ ವಾರ್ಡ್‌ ವ್ಯಾಪ್ತಿಗಳಲ್ಲಿ ಶಿಕ್ಷಕರನ್ನು ನಿಯೋಜನೆ ಮಾಡಿ, ಅಲ್ಲಿನ ಪ್ರದೇಶಗಳ ಕುಂದು ಕೊರತೆಗಳ ಮಾಹಿತಿ ಸಂಗ್ರಹಿಸಿ, ಸಮಸ್ಯೆಗಳ ನಿವಾರಣೆಗೆ ಕ್ರಮಕೈಗೊಳ್ಳಲಾಗುವುದು ಎಂದರು.

Advertisement

ನಗರಸಭೆ ಪೌರಾಯುಕ್ತ ಜೆ.ಟಿ. ಹನುಮಂತರಾಜು ಮಾತನಾಡಿ, ಮಾರುಕಟ್ಟೆಗಳಲ್ಲಿ ಹೆಚ್ಚು ಜನಸಂದಣಿ ಇರುವುದರಿಂದ ಸೋಂಕು ನಿವಾರಕ ಮಾರ್ಗ ಅಳವಡಿಸಲಾಗಿದೆ. ಸಾರ್ವಜನಿಕರು ಇದೇ ಮಾರ್ಗದ ಮೂಲಕ ಸಂಚರಿಸಬೇಕು. ಈ ಮಾರ್ಗದಲ್ಲಿ ಸೋಡಿಯಂ ಹೈಪೊಕ್ಲೋರೈಡ್‌ ಹಾಗೂ ನೀರಿನಿಂದ ಸೋಂಕು ನಿವಾರಕ ದ್ರಾವಣವನ್ನು ಸಿದ್ಧಪಡಿಸಲಾಗಿದೆ. ಸೋಂಕು ನಿವಾರಕ ಮಾರ್ಗ ಬೆಳಗ್ಗೆ 4ರಿಂದ 9 ರವರೆಗೆ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಾಜಶೇಖರ್‌ ಹಾಗೂ ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next