Advertisement

ಸಾಮಾಜಿಕ ಅನಿಷ್ಟ ಪದ್ಧತಿ ನಿವಾರಣೆಗೆ ಶಿಕ್ಷಣವೇ ಅಸ್ತ್ರ: ಡಿಡಿಪಿಐ

08:01 PM Mar 05, 2020 | Naveen |

ಚಿತ್ರದುರ್ಗ: ಸಾಮಾಜಿಕ ಅನಿಷ್ಟ ಪದ್ಧತಿಗಳಾದ ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಯನ್ನು ತೊಡೆದು ಹಾಕಲು ಶಿಕ್ಷಣದಿಂದ ಮಾತ್ರ ಸಾಧ್ಯ. ಇದಕ್ಕೆ ಪೂರಕ ವಾತಾವರಣ ನಿರ್ಮಾಣ ಮಾಡುವ ಅಗತ್ಯವಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ರವಿಶಂಕರ ರೆಡ್ಡಿ ಹೇಳಿದರು.

Advertisement

ನಗರದ ಪತ್ರಿಕಾ ಭವನದಲ್ಲಿ ಬುಧವಾರ ವಿಮುಕ್ತಿ ವಿದ್ಯಾ ಸಂಸ್ಥೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಶಾಂತಿ ಮತ್ತು ಸೌಹಾರ್ದ ವೇದಿಕೆ ವತಿಯಿಂದ ಏರ್ಪಡಿಸಿದ್ದ ಬಾಲ್ಯವಿವಾಹ, ಬಾಲಕಾರ್ಮಿಕತೆ ಕುರಿತು ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಅನಿಷ್ಟ ಪದ್ಧತಿಗಳಾಗಿರುವ ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಮತ್ತು ಮಾಧ್ಯಮದವರು ಪ್ರಾಮಾಣಿಕ ಪ್ರಯತ್ನ ಮಾಡಿದರೆ ಸುಧಾರಣೆ ತರಬಹುದು ಎಂದು ಅಭಿಪ್ರಾಯಪಟ್ಟರು.

ಸರ್ವ ಶಿಕ್ಷಣ ಅಭಿಯಾನದ ಅಧಿಕಾರಿ ನಾಗಭೂಷಣ ಮಾತನಾಡಿ, ಶಿಕ್ಷಣ ಇಲಾಖೆ ಸತತವಾಗಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತರುವ ಪ್ರಯತ್ನ ನಡೆಸಿದೆ. ಗ್ರಾಮೀಣ ಪ್ರದೇಶದಲ್ಲಿನ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗಾಗಿ ಜಾಗೃತಿ ಸಭೆಗಳನ್ನು ನಡೆಸುವ ಮೂಲಕ ಚುನಾಯಿತ ಪ್ರತಿನಿಧಿಗಳು, ಶಿಕ್ಷಕರು, ಸ್ವಸಹಾಯ ಸಂಘದ ಮಹಿಳೆಯರು, ವಿದ್ಯಾರ್ಥಿ ಯುವಜನರನ್ನು ಒಳಗೊಂಡ ಸಿ.ಎಲ್‌.ಎಫ್‌. ಝಡ್‌ ಸಮಿತಿಗಳನ್ನು ರಚಿಸುವ ಮೂಲಕ ಅನಿಷ್ಟ ಪದ್ಧತಿಗಳನ್ನು ನಿರ್ಮೂಲನೆ ಮಾಡುವ ಕಾರ್ಯಕ್ಕೆ ಚಿತ್ರದುರ್ಗ ತಾಲೂಕಿನ ಎಂ.ಕೆ. ಹಟ್ಟಿ, ಲಕ್ಷ್ಮೀಸಾಗರ, ಮೆದೇಹಳ್ಳಿ ಗ್ರಾಮ ಪಂಚಾಯತ್‌ಗಳಲ್ಲಿ ಕಾರ್ಯ ಆರಂಭಿಸಲಾಗಿದೆ ಎಂದರು. ವಿಮುಕ್ತಿ ವಿದ್ಯಾ ಸಂಸ್ಥೆ ನಿರ್ದೇಶಕ ಆರ್‌. ವಿಶ್ವಸಾಗರ್‌ ಮಾತನಾಡಿದರು. ಚಿತ್ರ ಡಾನ್‌ಬಾಸ್ಕೋ ಸಂಸ್ಥೆ ನಿರ್ದೇಶಕ ಫಾದರ್‌ ಸೋನಿಚಂದ್‌ ಮ್ಯಾಥ್ಯೂ, ನಿಶಾ, ನರೇನಹಳ್ಳಿ ಅರುಣ್‌ಕುಮಾರ್‌, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ| ಪ್ರಭಾಕರ್‌, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಚ್‌. ಲಕ್ಷ್ಮಣ್‌, ಬಸವೇಶ್ವರ ವಿದ್ಯಾಸಂಸ್ಥೆ ಕಾರ್ಯದರ್ಶಿ ವಿ.ಕೆ. ಶಂಕರಪ್ಪ, ಪತ್ರಕರ್ತರಾದ ಸಿದ್ದರಾಜು, ಪುಟ್ಟಸ್ವಾಮಿ, ಕುಮಾರ್‌ ಅರಣ್ಯಸಾಗರ್‌, ಸಂಪಿಗೆ ತಿಪ್ಪೇಸ್ವಾಮಿ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next