Advertisement
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೋಗಗಳ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.
Related Articles
Advertisement
ಸಭೆಯಲ್ಲಿ ಜಿಲ್ಲಾ ನಿವಾಸಿ ಆರೋಗ್ಯಾಧಿಕಾರಿ ಡಾ| ಆನಂದಪ್ರಕಾಶ್, ಆರೋಗ್ಯ ಇಲಾಖೆಯ ಅನುಷ್ಠಾನಾಧಿಕಾರಿಗಳು, ತಾಲೂಕು ವೈದ್ಯಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿದ್ದರು
ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಡೆಂಘೀ ಮತ್ತು ಚಿಕೂನ್‌ಗುನ್ಯಾ ರೋಗ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ನಿರ್ವಹಣೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೋಗಗಳ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ಪತ್ತೆ ಮಾಡಿ ಲಾರ್ವಾ ನಾಶ ಪಡಿಸಬೇಕು. ಸೊಳ್ಳೆಗಳ ಸಂತತಿ ಹೆಚ್ಚಳಕ್ಕೆ ನಿಂತ ನೀರು ಕಾರಣವಾಗಲಿದೆ. ಆರೋಗ್ಯ ಇಲಾಖೆಯವರು ಮನೆ ಮನೆಗೆ ಭೇಟಿ ಮಾಡಿ, ಸೊಳ್ಳೆಗಳ ಉತ್ಪತ್ತಿ ತಾಣವನ್ನು ಗುರುತಿಸಿ ನಿರ್ಮೂಲನೆ ಮಾಡಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಈ ಕಾರ್ಯ ಸಮರ್ಪಕವಾಗಿ ಆಗದೇ ಇರುವುದರಿಂದ ರೋಗ ಪತ್ತೆ ಪ್ರಕರಣಗಳು ಹೆಚ್ಚುತ್ತಿವೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸಿ.ಎಲ್. ಪಾಲಾಕ್ಷ ಮಾತನಾಡಿ, ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷ ಡೆಂಘೀ ಮತ್ತು ಚಿಕೂನ್‌ಗುನ್ಯಾ ಪ್ರಕರಣಗಳು ಕಡಿಮೆಯಾಗಿವೆ. ಈ ವರ್ಷ ಚಳ್ಳಕೆರೆ ತಾಲೂಕಿನಲ್ಲಿ ಡೆಂಘೀ 7, ಚಿಕೂನ್‌ಗುನ್ಯಾ 4, ಚಿತ್ರದುರ್ಗ-ಡೆಂಘೀ 28, ಚಿಕೂನ್‌ಗುನ್ಯಾ 17, ಹಿರಿಯೂರು-ಡೆಂಘೀ 5, ಚಿಕೂನ್‌ಗುನ್ಯಾ 1, ಹೊಳಲ್ಕೆರೆ-ಡೆಂಘೀ 11, ಚಿಕೂನ್ ಗುನ್ಯೂ 8, ಹೊಸದುರ್ಗ-ಡೆಂಘೀ 3, ಚಿಕೂನ್‌ಗುನ್ಯಾ 6, ಮೊಳಕಾಲ್ಮೂರು-ಡೆಂಘೀ 4, ಚಿಕೂನ್‌ಗುನ್ಯಾ 1 ಸೇರಿದಂತೆ ಇಲ್ಲಿಯವರೆಗೆ ಒಟ್ಟು ಡೆಂಘೀ 58 ಹಾಗೂ ಚಿಕೂನ್‌ಗುನ್ಯಾ 39 ಪ್ರಕರಣಗಳು ವರದಿಯಾಗಿವೆ. ಇದುವರೆಗೆ 616 ರಕ್ತ ಮಾದರಿ ಪರೀಕ್ಷೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಡೆಂಘೀ ಮತ್ತು ಚಿಕೂನ್‌ಗುನ್ಯಾ ಬಾರದಂತೆ ಸಾರ್ವಜನಿಕರು ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಹೆಚ್ಚು ನೀರು ಸಂಗ್ರಹ ಮಾಡಿಕೊಳ್ಳಬಾರದು. ಸೊಳ್ಳೆಗಳು ನೀರಿನ ಸಂಗ್ರಹಣೆಯೊಳಗೆ ಹೋಗದಂತೆ ಭದ್ರವಾಗಿ ಮುಚ್ಚಳ ಮುಚ್ಚಬೇಕು. ತೊಟ್ಟಿಗಳ ಒಳಭಾಗವನ್ನು ಸ್ವಚ್ಛಗೊಳಿಸಿ ಒಣಗಿಸಬೇಕು. ಹಗಲು, ರಾತ್ರಿ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು. ಮನೆಯ ಕಿಟಕಿ, ಬಾಗಿಲುಗಳನ್ನು ಮುಚ್ಚಬೇಕು. ಸೊಳ್ಳೆ ನಿರೋಧಕ ಜಾಲರಿ ಅಳವಡಿಸಬೇಕು. ಮನೆಯ ಸುತ್ತ ಟೈರ್, ಇತರ ಘನತ್ಯಾಜ್ಯಗಳನ್ನು ವಿಲೇ ಮಾಡಬೇಕು. ಫ್ರಿಡ್ಜ್ ಮತ್ತು ಏರ್‌ಕೂಲರ್‌ಗಳನ್ನು ಸ್ವಚ್ಛಗೊಳಿಸಬೇಕು. ಜ್ವರ ಕಂಡುಬಂದಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಆಶಾ ಕಾರ್ಯಕರ್ತರು ಲಾರ್ವಾ ಸಮೀಕ್ಷೆಗೆ ಮನೆಗೆ ಬಂದಾಗ ಸಹಕರಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ನಿವಾಸಿ ಆರೋಗ್ಯಾಧಿಕಾರಿ ಡಾ| ಆನಂದಪ್ರಕಾಶ್, ಆರೋಗ್ಯ ಇಲಾಖೆಯ ಅನುಷ್ಠಾನಾಧಿಕಾರಿಗಳು, ತಾಲೂಕು ವೈದ್ಯಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿದ್ದರು