Advertisement
ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ , ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಚಿತ್ರದುರ್ಗ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಿದ್ದ ಬುಡಕಟ್ಟು ಜನರ ಹಕ್ಕು ಜಾರಿ ಮತ್ತು ಸಂರಕ್ಷಣೆ ಯೋಜನೆ-2015 ಕುರಿತು ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳಾದ ಎಲ್ಲರೂ ವಿದ್ಯಾಭ್ಯಾಸವನ್ನು ಶ್ರದ್ಧೆಯಿಂದ ಮಾಡಿ ಸಮಾಜದಲ್ಲಿ ಎಲ್ಲರೊಂದಿಗೆ ಸಮಾನವಾಗಿ ಬದುಕಲು ಪ್ರಯತ್ನಿಸಬೇಕು ಎಂದು ಹೇಳಿದರು.
ಸರ್ಕಾರದ ಸಿಗುವ ಸೌಲಭ್ಯಗಳನ್ನು ಆದಷ್ಟು ಹೆಚ್ಚಾಗಿ ಉಪಯೋಗಿಸಿಕೊಂಡು ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು. ಸರ್ಕಾರಕ್ಕೆ ಸಹಕಾರ ನೀಡಿದರೆ ಮಾತ್ರ ಸರ್ಕಾರ ಕೈಗೊಂಡ ಕಾರ್ಯಕ್ರಮಗಳು ಯಶಸ್ವಿಯಾಗಿ ರಾಷ್ಟ್ರ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಜೆ. ರಾಜು ಮಾತನಾಡಿ, ಬುಡಕಟ್ಟು ಸಮುದಾಯಗಳಿಗೆ ಸರ್ಕಾರ ನೀಡಿರುವ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಈ ಸೌಲಭ್ಯಗಳನ್ನು ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಕರೆ ನೀಡಿದರು.
ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎಂ. ಅನಿಲ್ ಕುಮಾರ್ ಮಾತನಾಡಿ, ಅವಕಾಶ ವಂಚಿತ ಬುಡಕಟ್ಟು ಸಮುದಾಯಗಳು ಕಡ್ಡಾಯವಾಗಿ ಮಕ್ಕಳಿಗೆ ಶಿಕ್ಷಣ ಕಲಿಸಿದರೆ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯವಿದೆ ಎಂದು ತಿಳಿಸಿದರು.
ಪ್ಯಾನಲ್ ವಕೀಲ ದಿಲ್ ಶಾದ್ ಉನ್ನೀಸಾ ಬುಡಕಟ್ಟು ಸಮುದಾಯಗಳ ಹಕ್ಕುಗಳು, ದೌರ್ಜನ್ಯ ತಡೆ ಕಾಯ್ದೆ, ಅರಣ್ಯ ಹಕ್ಕುಗಳ ಕುರಿತು ಉಪನ್ಯಾಸ ನೀಡಿದರು. ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಟಿ. ಗುರುಮೂರ್ತಿ ಇದ್ದರು. ಪ್ರಕಾಶ್ ನಿರೂಪಿಸಿದರು. ಹನುಮಂತಪ್ಪ ಪೂಜಾರ್ ಸ್ವಾಗತಿಸಿ ವಂದಿಸಿದರು.