Advertisement

ಕೋಟೆ ನಗರಿಯಲ್ಲಿಂದು ದೋಸ್ತಿ ಮತಬೇಟೆ

10:38 AM Apr 13, 2019 | |

ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವಿಜಯ ಸಂಕಲ್ಪ ರ್ಯಾಲಿ ನಡೆದ ನಾಲ್ಕು ದಿನಗಳ ಬಳಿಕ ಏ. 13ರಂದು ಮಧ್ಯಾಹ್ನ 2 ಗಂಟೆಗೆ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಕ್ರೀಡಾಂಗಣದಲ್ಲಿ ಕಾಂಗ್ರೆಸ್‌ -ಜೆಡಿಎಸ್‌ ಪಕ್ಷಗಳ ಬೃಹತ್‌ ಬಹಿರಂಗ ಸಮಾವೇಶವನ್ನು ಆಯೋಜಿಸಲಾಗಿದೆ. ಮೈತ್ರಿಕೂಟದ ಘಟಾನುಘಟಿ ನಾಯಕರು ಸಮಾವೇಶದಲ್ಲಿ ಪಾಲ್ಗೊಂಡು ಕೋಟೆ ನಗರಿಯಲ್ಲಿ ರಣಕಹಳೆ ಮೊಳಗಿಸಲಿದ್ದಾರೆ.

Advertisement

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಕೆ. ಪಾಟೀಲ್‌, ಸಚಿವರಾದ ಡಿ.ಕೆ. ಶಿವಕುಮಾರ್‌, ಸತೀಶ್‌ ಜಾರಕಿಹೊಳಿ, ವೆಂಕಟರಮಣಪ್ಪ, ವಿಧಾನ ಪರಿಷತ್‌ ಸದಸ್ಯ ಸಿ.ಎಂ. ಇಬ್ರಾಹಿಂ, ಮಾಜಿ ಸಚಿವರಾದ ಟಿ.ಬಿ. ಜಯಚಂದ್ರ, ಎಚ್‌. ಆಂಜನೇಯ, ಶಾಸಕರಾದ ಟಿ. ರಘುಮೂರ್ತಿ, ಸತ್ಯನಾರಾಯಣ, ಜೆಡಿಎಸ್‌ ಜಿಲ್ಲಾಧ್ಯಕ್ಷ ಡಿ. ಯಶೋಧರ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಫಾತ್ಯರಾಜನ್‌, ಮಾಜಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಎ.ವಿ. ಉಮಾಪತಿ, ಡಿ. ಸುಧಾಕರ್‌ ಭಾಗವಹಿಸಲಿದ್ದಾರೆ.

ಒಂದು ಲಕ್ಷ ಜನರ ನಿರೀಕ್ಷೆ: ಮಾಜಿ ಸಚಿವ ಎಚ್‌.ಆಂಜನೇಯ ಶುಕ್ರವಾರ ಸಮಾವೇಶದ ಸಿದ್ಧತೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 25 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಒಂದು ಲಕ್ಷ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಹರಿಹರ ಸಹನ ವಾದ್ಯ ಗೋಷ್ಠಿಯವರಿಂದ ಹಾಗೂ ಗಾನಕೋಗಿಲೆ ಗಂಗಮ್ಮ, ದೊಡ್ಡಪ್ಪ ಮಾದರ್‌ ಮತ್ತಿತರ ಖ್ಯಾತ ಗಾಯಕರಿಂದ ರಸಮಂಜರಿ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next