Advertisement
ಚುನಾವಣೆಗೆ ಕೆಲವೇ ದಿನಗಳಿರುವಾಗ ಪ್ರಧಾನಿ ಮೋದಿ ಚಿತ್ರದುರ್ಗದಲ್ಲಿ ವಿಜಯ ಸಂಕಲ್ಪ ರ್ಯಾಲಿ ನಡೆಸಿದರು. ತಮ್ಮ ವಾಕ್ಚಾತುರ್ಯದಿಂದ ಜಿಲ್ಲೆಯ ಮತದಾರರನ್ನು ಸೆಳೆದರು. ಅಲ್ಲದೆ ಪುಲ್ವಾಮಾ ದಾಳಿಗೆ ಪ್ರತಿಯಾಗಿ ಬಾಲಾಕೋಟ್ ಮೇಲೆ ಸರ್ಜಿಕಲ್ ದಾಳಿ ನಡೆಸಿದ್ದು ಕೂಡ ಬಿಜೆಪಿ ಅಭ್ಯರ್ಥಿ ಗೆಲುವಿಗೆ ವರವಾಯಿತು. ಚಿತ್ರದುರ್ಗ ಲೋಕಸಭಾ ಕ್ಷೇತ್ರ, ಎಂಟು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಅದರಲ್ಲಿ ಐವರು ಬಿಜೆಪಿ ಶಾಸಕರು ಇದ್ದಾರೆ. ಅವರೆಲ್ಲರೂ ಬಿಜೆಪಿ ಗೆಲ್ಲಿಸಲೇಬೇಕೆಂದು ಪಣ ತೊಟ್ಟು ಪ್ರಯತ್ನ ಮಾಡಿದ್ದರಿಂದ ಕಾಂಗ್ರೆಸ್ ಭದ್ರಕೋಟೆಯಲ್ಲಿ ಕಮಲ ಅರಳುವಂತಾಗಿದೆ. ಯುವ ಮತದಾರರು ಜಾತಿ, ಮತ, ಧರ್ಮ ಭೇದವಿಲ್ಲದೆ ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸಿದರು. ಇದು ಕೂಡ ಬಿಜೆಪಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದೆ. ನಾರಾಯಣಸ್ವಾಮಿ ಸದ್ದುಗದ್ದಲವಿಲ್ಲದೆ ದಲಿತ ಮತಗಳ ವಿಭಜನೆ ಮಾಡಿ ಮೇಲ್ಜಾತಿಯ ಮತಗಳನ್ನು ತಮ್ಮದಾಗಿಸಿಕೊಂಡಿದ್ದರಿಂದ ಗೆಲುವು ಸಾಧಿಸುವಂತಾಯಿತು ಎಂದು ಹೇಳಲಾಗುತ್ತಿದೆ. Advertisement
ದಡ ಸೇರಿಸಿದ ಮೋದಿ ಅಲೆ-ಯುವ ಮತದಾರರು
03:27 PM May 24, 2019 | Naveen |
Advertisement
Udayavani is now on Telegram. Click here to join our channel and stay updated with the latest news.