Advertisement

ಸಾರ್ವಜನಿಕ ಸ್ಥಳಗಳ ಮೇಲೆ ನಿಗಾ ಇಡಿ

02:57 PM Mar 16, 2020 | Naveen |

ಚಿತ್ರದುರ್ಗ: ಕೊರೊನಾ ವೈರಸ್‌ ತಡೆಗಟ್ಟುವ ಹಿನ್ನೆಲೆಯಲ್ಲಿ ಪಕ್ಕದ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ಗ್ರಾಮಗಳ ಮೂಲಕ ಸಂಚರಿಸುವ ಬಸ್‌ಗಳು ಹಾಗೂ ಅನ್ಯ ರಾಜ್ಯಗಳ ನಾಗರಿಕರ ಮಾಹಿತಿಯನ್ನು ಆಶಾ ಕಾರ್ಯಕರ್ತೆಯರ ಮೂಲಕ ಪಡೆಯಬೇಕು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ಸೂಚಿಸಿದರು.

Advertisement

ಕೊರೊನಾ ವೈರಸ್‌ ಮುಂಜಾಗ್ರತೆ ಕುರಿತಂತೆ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆ ಕಚೇರಿಯಲ್ಲಿ ಭಾನುವಾರ ನಡೆದ ತಾಲೂಕು ವೈದ್ಯಾಧಿಕಾರಿಗಳು ಹಾಗೂ ಸರ್ಕಾರಿ ಆಸ್ಪತ್ರೆ ವೈದ್ಯರ ತುರ್ತು ಸಭೆಯಲ್ಲಿ ಅವರು ಮಾತನಾಡಿದರು.

ಕೊರೊನಾ ವೈರಸ್‌ ಸೋಂಕು ತಡೆಗಟ್ಟುವ ಸಲುವಾಗಿ ಈಗಾಗಲೇ ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ಘೋಷಿಸಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಪ್ರಮುಖ ದೇವಸ್ಥಾನ, ಮಂದಿರ, ಮಸೀದಿಗಳಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಜಾತ್ರೆ, ಕಲ್ಯಾಣಮಂಟಪ, ಹೋಟೆಲ್‌, ಪ್ರವಾಸಿಗರು ಸೇರುವ ಯಾತ್ರಾ ಸ್ಥಳಗಳಲ್ಲಿ ನಿಗಾ ಇಡಲು ತಂಡ ರಚಿಸಿ ಪರಿಶೀಲನೆ ನಡೆಸಬೇಕು. ಸರ್ಕಾರದ ಆದೇಶ ಪಾಲಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದರು.

ಜಿಲ್ಲೆಯ ಪ್ರಮುಖ ನಗರಗಳ ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣ, ಚಿತ್ರಮಂದಿರ, ದೇವಸ್ಥಾನ, ಮಂದಿರ, ಮಸೀದಿಗಳಲ್ಲಿ ಮುಂಜಾಗ್ರತಾ ಕ್ರಮ ವಹಿಸಬೇಕು. ಜಾತ್ರೆ, ಕಲ್ಯಾಣಮಂಟಪ, ಹೋಟೆಲ್‌, ಪ್ರವಾಸಿಗರು ಸೇರುವ ಯಾತ್ರಾ ಸ್ಥಳಗಳಿಗೆ ನಿಗವಾಣೆ ತಂಡಗಳನ್ನು ಕಳುಹಿಸಿ ನಿಯಮಗಳ ಪಾಲನೆ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಸರ್ಕಾರದ ಸೂಚನೆಗಳನ್ನು ಪಾಲಿಸದವರ ವಿರುದ್ಧ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ ಅನುಸಾರ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಸಿ.ಎಲ್‌. ಪಾಲಾಕ್ಷ ಮಾತನಾಡಿ, ಪ್ರತಿ ತಾಲೂಕಿಗೆ ಒಂದರಂತೆ ಈಗಾಗಲೇ ರ್ಯಾಪಿಡ್‌ ರೆಸ್ಕ್ಯೂ  ಟೀಮ್‌ ರಚಿಸಲಾಗಿದೆ ಎಂದರು. ಅಲ್ಲದೆ ಇದುವರೆಗೆ ಜಿಲ್ಲೆಯಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಣೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಎಲ್ಲಾ ತಾಲೂಕು ಆರೋಗ್ಯಾಧಿಕಾರಿಗಳು ತಮ್ಮ ತಮ್ಮ ತಾಲೂಕಿನಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆ ಪ್ರತಿನಿತ್ಯ ಡಿಎಚ್‌ಒ ಮೂಲಕ ಕೊರೊನಾ ವೈರಸ್‌ ನಿಯಂತ್ರಣದ ಕುರಿತ ದೈನಂದಿನ ವರದಿ ಸಲ್ಲಿಸಲು ತಿಳಿಸಿದರು.

Advertisement

ಸಭೆಯಲ್ಲಿ ಬಸವೇಶ್ವರ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಪಾಲಾಕ್ಷಯ್ಯ, ಜಿಲ್ಲಾ ಸರ್ವೇಕ್ಷಣಾಧಿ ಕಾರಿ ಡಾ| ತುಳಸಿ ರಂಗನಾಥ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ| ಬಸವರಾಜ್‌ ಸೇರಿದಂತೆ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಆಡಳಿತ ವೈದ್ಯಾಧಿಕಾರಿಗಳು, ಜಿಲ್ಲಾ ಮತ್ತು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿಗಳು ಜಿಲ್ಲಾ ಮೇಲ್ವಿಚಾರಕರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next