Advertisement
ಮುರುಘಾ ಮಠದ ಅನುಭವ ಮಂಟಪದಲ್ಲಿ ಗುರುವಾರ 2019ರ ಶರಣ ಸಂಸ್ಕೃತಿ ಉತ್ಸವದ ದಾಸೋಹ ಸೇವಾರ್ಥಿಗಳಿಗೆ ಮತ್ತು ಕಾರ್ಯಕರ್ತರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದ ಸಾನ್ನಿಧ್ಯ ವಹಿಸಿ ಶರಣರು ಆಶೀರ್ವಚನ ನೀಡಿದರು.
Related Articles
Advertisement
2019ರ ಶರಣ ಸಂಸ್ಕೃತಿ ಉತ್ಸವದ ಕಾರ್ಯಾಧ್ಯಕ್ಷರಾಗಿದ್ದ ಹನುಮಲಿ ಷಣ್ಮುಖಪ್ಪ ಮಾತನಾಡಿ, ಈ ಉತ್ಸವದಿಂದ ನನ್ನ ಜೀವನದಲ್ಲಿ ವಿಶಿಷ್ಟ ಅನುಭವಗಳನ್ನು ಪಡೆದಿದ್ದೇನೆ. ಬೆಳಗಿನ ಸಹಜ ಶಿವಯೋಗದಿಂದ ಅಂಗದ ಮೇಲೆ ಲಿಂಗ ಧರಿಸಿ ನನ್ನ ಪತ್ನಿ, ಮಗ, ಮೊಮ್ಮಗ ಸೇರಿದಂತೆ ಎಲ್ಲರೂ ನಿತ್ಯ ಲಿಂಗಪೂಜೆ ಮಾಡುತ್ತಿದ್ದೇವೆ. ಇಂತಹ ಅವಕಾಶವನ್ನು ನೀಡಿದ ಶರಣರಿಗೆ ಧನ್ಯವಾದಗಳು ಎಂದು ಹೇಳಿದರು.
ಹೊಸದುರ್ಗ ಕುಂಚಿಟಿಗ ಗುರುಪೀಠದ ಡಾ| ಶಾಂತವೀರ ಸ್ವಾಮೀಜಿ ಮಾತನಾಡಿದರು. ಶ್ರೀ ಶಿವಬಸವ ಸ್ವಾಮಿಗಳು, ಶ್ರೀ ಬಸವ ರಮಾನಂದ ಸ್ವಾಮಿಗಳು, ಶ್ರೀ ಬಸವ ನಾಗಿದೇವ ಸ್ವಾಮಿಗಳು, ಶ್ರೀ ಇಮ್ಮಡಿ ಬಸವ ಮೇದಾರ ಕೇತೇಶ್ವರ ಸ್ವಾಮಿಗಳು, ಶ್ರೀ ಬಸವ ಶಾಂತಲಿಂಗ ಸ್ವಾಮಿಗಳು, ಶ್ರೀ ಬಸವ ನಿರಂಜನ ಸ್ವಾಮಿಗಳು, ಶ್ರೀ ಬಸವಪ್ರಭು ಸ್ವಾಮಿಗಳು, ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ಶ್ರೀ ಚನ್ನಮಲ್ಲಿಕಾರ್ಜುನ ಸ್ವಾಮಿಗಳು ಸೇರಿದಂತೆ ಹರಗುರು ಚರಮೂರ್ತಿಗಳು ಇದ್ದರು.
ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ, ಶರಣ ಸಂಸ್ಕೃತಿ ಉತ್ಸವದ ಜಮಾ-ಖರ್ಚು ವೆಚ್ಚಗಳ ಮಾಹಿತಿ ನೀಡಿದರು. ಜಮುರಾ ಕಲಾವಿದರು ಪ್ರಾರ್ಥಿಸಿದರು. ಡಾ| ಬಸವಕುಮಾರ ಸ್ವಾಮೀಜಿ ಸ್ವಾಗತಿಸಿದರು.