ಚಿತ್ರದುರ್ಗ: ಜನರನ್ನು ಮೋಡಿ ಮಾಡಿ 2014ರಲ್ಲಿ ಅ ಧಿಕಾರ ಹಿಡಿದ ಪ್ರಧಾನಿ ನರೇಂದ್ರಮೋದಿ ನಿರುದ್ಯೋಗಿ ಯುವಕರಿಗೆ ಉದ್ಯೋಗವಿರಲಿ, ಕೊಬ್ಬರಿ ಮಿಠಾಯಿಯನ್ನೂಕೊಡಲಿಲ್ಲ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್‌ಆರೋಪಿಸಿದರು.ನಗರದ ಗಾಯತ್ರಿ ಕಲ್ಯಾಣಮಂಟಪದಲ್ಲಿ ಮಂಗಳವಾರ ಜಿಲ್ಲಾ ಯುವ ಕಾಂಗ್ರೆಸ್‌ಸಮಿತಿ ಆಯೋಜಿಸಿದ್ದ ಯುವಕ್ರಾಂತಿ ಸಮಾವೇಶದಲ್ಲಿ ಅವರು ಮಾತನಾಡಿದರು.
ಅ ಧಿಕಾರಕ್ಕೇರುವ ಮುನ್ನ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಮೋದಿಹೇಳಿದ್ದರು. ಈ 7 ವರ್ಷದಲ್ಲಿ 14 ಕೋಟಿ ಉದ್ಯೋಗ ಒದಗಿಸಬೇಕಾಗಿತ್ತು. ಆದರೆನಿರುದ್ಯೋಗಿ ಯುವಕರು ಪಕೋಡ ಮಾರಾಟ ಮಾಡುವಂತೆ ಸಲಹೆ ನೀಡುತ್ತಿದ್ದಾರೆ.ಯುವಕರ ಸಮಸ್ಯೆಗೆ ಪ್ರಧಾನಿ ಸ್ಪಂದಿಸುತ್ತಿಲ್ಲ ಎಂದು ದೂರಿದರು.ಈ ದೇಶದ ಬಗ್ಗೆ ನಿಜವಾದ ಕಾಳಜಿ ಇರುವುದು ಕಾಂಗ್ರೆಸ್‌ಗೆ ಮಾತ್ರ. ಅಧಿ ಕಾರಸಿಕ್ಕಿದಾಗ ಜನಪರ ಆಡಳಿತ ನೀಡುವುದು ನಮ್ಮ ಪಕ್ಷದ ಧ್ಯೇಯ. ದೇಶಕ್ಕೆ ಸ್ವಾತಂತ್ರÂತಂದುಕೊಟ್ಟ ಕಾಂಗ್ರೆಸ್‌ಗೆ ಆಡಳಿತದ ಅನುಭವ ಇದೆ.
ಬಿಜೆಪಿ ಇತಿಹಾಸ ತಿರುಚುವಹಾಗೂ ಅಂಬೇಡ್ಕರ್ ನೀಡಿದ ಸಂವಿಧಾನ ಬದಲಾವಣೆ ಮಾಡುವ ಹುನ್ನಾರನಡೆಸುತ್ತಿದೆ. ದೇಶವನ್ನು ಆದಾನಿ, ಅಂಬಾನಿಗೆ ಅಡಮಾನ ಮಾಡುತ್ತಿದ್ದಾರೆ ಎಂದುಆತಂಕ ವ್ಯಕ್ತಪಡಿಸಿದರು.ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಮಾತನಾಡಿ, ದೇಶದಲ್ಲಿ ಆಡಳಿತ ನಡೆಸುತ್ತಿರುವಬಿಜೆಪಿ ಬಗ್ಗೆ ಜನತೆ ವಿಶ್ವಾಸ ಕಳೆದುಕೊಂಡಿದ್ದಾರೆ. ಒಂದು ಕಡೆ ಪ್ರಧಾನಿ ಸಫಾಯಿಕರ್ಮಚಾರಿಗಳ ಪಾದ ತೊಳೆಯುತ್ತಾರೆ.
ಇದೇ ವೇಳೆ ಕೇಳದಿದ್ದರೂ ಮೇಲ್ವರ್ಗದವರಿಗೆಶೇ. 10ರಷ್ಟು ಮೀಸಲಾತಿ ನೀಡುತ್ತಾರೆ. ಮೀಸಲಾತಿಗಾಗಿ ಹೋರಾಟ ಮಾಡಿದವರಿಗೆಕೊಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್. ಮಂಜುನಾಥ್, ಕಾಂಗ್ರೆಸ್‌ಮುಖಂಡ ಸೋಮಶೇಖರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರೇಹಳ್ಳಿ ಉಲ್ಲಾಸ್‌ಮಾತನಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್‌ಪೀರ್ ಅಧ್ಯಕ್ಷತೆ ವಹಿಸಿದ್ದರು.ಮಾಜಿ ಶಾಸಕ ಎ.ವಿ. ಉಮಾಪತಿ, ವಿಧಾನ ಪರಿಷತ್ ಮಾಜಿ ಸದಸ್ಯೆ ಜಯಮ್ಮ,ಮುಖಂಡರಾದ ಸಂಪತ್‌ಕುಮಾರ್, ಮೈಲಾರಪ್ಪ, ಗೀತಾನಂದಿನಿ ಗೌಡ, ಆನಂದ್,ಮಹಮ್ಮದ್ ರμ, ಗೋವರ್ಧನ, ಗುರು, ಹರೀಶ್, ರಾಜೇಂದ್ರಪ್ರಸಾದ್ ಇದ್ದರು.