Advertisement

ಬೆಲೆ ಏರಿಕೆಗೆ ಕಾರ್ಮಿಕ ಸಂಘಟನೆಗಳ ಆಕ್ರೋಶ

07:42 PM Mar 30, 2022 | Team Udayavani |

ಚಿತ್ರದುರ್ಗ: ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಹಾಗೂ ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಹಾಗೂ ಇನ್ನಿತರೆ ಬೇಡಿಕೆಗಳನ್ನುಈಡೇರಿಸಲು ಒತ್ತಾಯಿಸಿ ವಿವಿಧ ಕಾರ್ಮಿಕ ಸಂಘಟನೆಗಳವತಿಯಿಂದ ಮಂಗಳವಾರ ನಗರದ ಜಿಲ್ಲಾ ಧಿಕಾರಿ ಕಚೇರಿ ವೃತ್ತದಲ್ಲಿಬೃಹತ್‌ ಪ್ರತಿಭಟನೆ ನಡೆಯಿತು.

Advertisement

ಬಿ.ಡಿ. ರಸ್ತೆಯಲ್ಲಿರುವ ಕಮ್ಯುನಿಸ್ಟ್‌ ಕಾರ್ಯಾಲಯದಿಂದಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿದ ಎಐಟಿಯುಸಿಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧಧಿಕ್ಕಾರ ಕೂಗಿದರು.

ಆದಾಯ ತೆರಿಗೆ ವ್ಯಾಪ್ತಿಗೆ ಒಳಪಡದ ಪ್ರತಿಕುಟುಂಬಕ್ಕೂ ಮಾಸಿಕ ಏಳೂವರೆ ಸಾವಿರ ರೂ.ಗಳನ್ನು ನೇರ ನಗದುಮೂಲಕ ವರ್ಗಾವಣೆ ಮಾಡಬೇಕು. ಪ್ರತಿ ವ್ಯಕ್ತಿಗೂ ತಲಾ ಹತ್ತುಕೆ.ಜಿ ಆಹಾರ ಧಾನ್ಯಗಳನ್ನು ನೀಡಬೇಕು ಎಂದು ಪ್ರತಿಭಟನಾಕಾರರುಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next