ಚಿತ್ರದುರ್ಗ: ಕನ್ನಡ ರಾಜ್ಯೋತ್ಸವದ ಅಂಗವಾಗಿಗುರುವಾರ ಜಿಲ್ಲೆಯ 13 ಸ್ಥಳಗಳಲ್ಲಿ ಸಾಮೂಹಿಕಕನ್ನಡ ಗೀತೆಗಳ ಗಾಯನ ನಡೆಯಿತು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿಇಲಾಖೆಯಿಂದ “ಕನ್ನಡಕ್ಕಾಗಿ ನಾವು ಅಭಿಯಾನ’ದ ಅಂಗವಾಗಿ ಜಿಲ್ಲಾಧಿ ಕಾರಿಗಳ ಕಚೇರಿ ಆವರಣ,ಶಾಲಾ-ಕಾಲೇಜುಗಳ ಆವರಣ, ಐತಿಹಾಸಿಕಕೋಟೆಯ ಆವರಣದ ಮುಂದೆ ನಿಂತು ಸರ್ಕಾರಿಅ ಧಿಕಾರಿಗಳು, ಸಿಬ್ಬಂದಿಗಳು, ವಿದ್ಯಾರ್ಥಿಗಳು,ಸಾರ್ವಜನಿಕರು ಸಾಮೂಹಿಕವಾಗಿ ಕನ್ನಡ ಗೀತೆಗಳ ಗಾಯನ ಮಾಡಿದರು.
ಲಕ್ಷ ಕಂಠಗಳ ಗೀತ ಗಾಯನ ಕಾರ್ಯಕ್ರಮದಲ್ಲಿನಾಡಗೀತೆಯೂ ಸೇರಿದಂತೆ ಕನ್ನಡ ನಾಡು-ನುಡಿ,ಸಂಸ್ಕೃತಿಯ ವೈಭವ, ಕನ್ನಡದ ಶ್ರೇಷ್ಠತೆ ಸಾರುವಂತಹಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮ, ಡಾ|ಕೆ.ಎಸ್. ನಿಸಾರ್ ಅಹಮ್ಮದ್ ಅವರ ಜೋಗದಸಿರಿ ಬೆಳಕಿನಲ್ಲಿ ಹಾಗೂ ಹಂಸಲೇಖ ಅವರಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬಮೂರು ಹಾಡುಗಳನ್ನು ಹಾಡಿದರು.
ನಂತರ ಚಿತ್ರದುರ್ಗ ಜಿಲ್ಲೆಯ ಶ್ರೇಷ್ಠತೆಯನ್ನು ಸಾರುವ”ನಾಗರಹಾವು’ ಚಲನಚಿತ್ರದ ಗೀತೆ “ಕನ್ನಡ ನಾಡಿನವೀರರಮಣಿಯ’ ಗೀತೆಯನ್ನು ಹಾಡಲಾಯಿತು.
ಚಿತ್ರದುರ್ಗ ಜಿಲೆಯ ಜಿಲ್ಲಾ ಕಾರಿಗಳ ಕಚೇರಿಆವರಣ, ಕೋಟೆ ಮುಂಭಾಗ, ಬಾಲಕಿಯರಸರ್ಕಾರಿ ಪದವಿಪೂರ್ವ ಕಾಲೇಜು, ಬಾಲಕರಸರ್ಕಾರಿ ಪದವಿ ಪೂರ್ವ ಕಾಲೇಜು, ಹೊಸದುರ್ಗ ಸರ್ಕಾರಿ ಪದವಿಪೂರ್ವ ಕಾಲೇಜು, ಮೊಳಕಾಲ್ಮೂರುಸರ್ಕಾರಿ ಪದವಿಪೂರ್ವ ಕಾಲೇಜು, ಹೊಳಲ್ಕೆರೆಸರ್ಕಾರಿ ಪದವಿಪೂರ್ವ ಕಾಲೇಜು, ಚಳ್ಳಕೆರೆಸರ್ಕಾರಿ ಪದವಿಪೂರ್ವ ಕಾಲೇಜು, ಹಿರಿಯೂರುಸರ್ಕಾರಿ ಪದವಿಪೂರ್ವ ಕಾಲೇಜು,ಚಿತ್ರದುರ್ಗ ಎಸ್‌ಆರ್‌ಎಸ್ ಕಾಲೇಜು, ಎಸ್‌ಜೆಎಂಐಟಿ ಕಾಲೇಜು, ಅರವಿಂದ ಗಾರ್ಮೆಂಟ್ಸ್,ತಳಕು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿಹಾಗೂ ಜಿಲ್ಲೆಯ 24 ಪೊಲೀಸ್ ಠಾಣೆಗಳವ್ಯಾಪ್ತಿಯಲ್ಲಿ ಸಾರ್ವಜನಿಕರು ಹಾಗೂವಿದ್ಯಾರ್ಥಿಗಳಿಂದ ಸಾಮೂಹಿಕವಾಗಿ ಕನ್ನಡಗೀತೆ ಗಾಯನ ಕಾರ್ಯಕ್ರಮ ನಡೆಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕನಿರ್ದೇಶಕ ಬಿ. ಧನಂಜಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪವಿಭಾಗಾಧಿ ಕಾರಿಆರ್. ಚಂದ್ರಯ್ಯ, ಗೀತ ಗಾಯನದ ಅಂಗವಾಗಿಪ್ರತಿಜ್ಞಾ ವಿಧಿ ಬೋಧಿಸಿದರು.ಜಿಲ್ಲಾ ಧಿಕಾರಿ ಕವಿತಾ ಎಸ್. ಮನ್ನಿಕೇರಿ,ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಜಿ. ರಾಧಿ ಕಾ,ಅಪರ ಜಿಲ್ಲಾ ಧಿಕಾರಿ ಇ.ಬಾಲಕೃಷ್ಣ, ಡಿವೈಎಸ್‌ಪಿಪಾಂಡುರಂಗ ಸೇರಿದಂತೆ ಅ ಧಿಕಾರಿಗಳು,ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.