Advertisement
ಹಿರಿಯೂರು ತಾಲೂಕಿನ ಐಮಂಗಲದ ಪೊಲೀಸ್ ತರಬೇತಿ ಶಾಲೆಯಲ್ಲಿ ಪೊಲೀಸ್ ತರಬೇತಿ ಪೂರ್ಣಗೊಳಿಸಿದ 352 ಪ್ರಶಿಕ್ಷಣಾರ್ಥಿಗಳಿಗೆ ಶುಕ್ರವಾರ ಏರ್ಪಡಿಸಿದ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Related Articles
Advertisement
ಐಮಂಗಲ ಪೊಲೀಸ್ ತರಬೇತಿ ಶಾಲೆ ಪ್ರಾಂಶುಪಾಲ ಪಿ. ಪಾಪಣ್ಣ ಮಾತನಾಡಿ, ಶಾಲೆಯಿಂದ ಸದ್ಯ 4ನೇ ತಂಡದಲ್ಲಿ 352 ಪ್ರಶಿಕ್ಷಣಾರ್ಥಿಗಳ 8 ತಿಂಗಳ ತರಬೇತಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಬೆಂಗಳೂರು ನಗರ ಮತ್ತು ಜಿಲ್ಲೆ ವಿಭಾಗ, ರಾಮನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಆಯ್ಕೆಯಾದ ರಾಜ್ಯದ ವಿವಿಧ ಜಿಲ್ಲೆಗಳ ಅಭ್ಯರ್ಥಿಗಳಿಗೆ ಇಲ್ಲಿ ತರಬೇತಿ ನೀಡಲಾಗಿದೆ ಎಂದು ಹೇಳಿದರು.
ಈ ಪೈಕಿ 322 ಗ್ರಾಮೀಣ ಪ್ರದೇಶದವರಾದರೆ, 30 ಅಭ್ಯರ್ಥಿಗಳು ನಗರ ಪ್ರದೇಶದವರಾಗಿದ್ದಾರೆ. ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ತರಬೇತಿಗೆ ಬಂದವರ ಪೈಕಿ ಇಂಜಿನಿಯರಿಂಗ್ ಪದವಿ ಪಡೆದ 3 ಅಭ್ಯರ್ಥಿಗಳು, ಸ್ನಾತಕೋತ್ತರ ಪದವಿಯ 36, ಪದವಿ-248, ಬಿಇಡಿ-17, ಐಟಿಐ, ಡಿಪ್ಲೋಮಾ-11, ಪಿಯುಸಿ ವಿದ್ಯಾರ್ಹತೆಯ 37 ಅಭ್ಯರ್ಥಿಗಳು ಆಯ್ಕೆಯಾಗಿ ತರಬೇತಿ ಪಡೆದಿದ್ದಾರೆ. ಪ್ರಶಿಕ್ಷಣಾರ್ಥಿಗಳಿಗೆ ರಸ್ತೆ ಸುರಕ್ಷತೆ, ಅಬಕಾರಿ, ಪ್ರಥಮ ಚಿಕಿತ್ಸೆ, ಭಯೋತ್ಪಾದಕರ ನಿಯಂತ್ರಣ, ಅಗ್ನಿಶಾಮಕ, ಕಾನೂನು ಅರಿವು, ಶಾಂತಿ ಸುವ್ಯವಸ್ಥೆ, ಸೈಬರ್ ಕ್ರೈಂ, ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ತಡೆ, ತಂಬಾಕು ನಿಯಂತ್ರಣ ಕಾಯ್ದೆ, ವ್ಯಕ್ತಿತ್ವ ವಿಕಸನ, ಒತ್ತಡ ನಿವಾರಣೆ, ಯೋಗ ಹೀಗೆ ಹಲವಾರು ವಿಷಯಗಳಲ್ಲಿ ತಜ್ಞರಿಂದ, ಒಳಾಂಗಣ ಮತ್ತು ಹೊರಾಂಗಣದ ತರಬೇತಿ ನೀಡಲಾಗಿದೆ. ಈವರೆಗೆ ಶಾಲೆಯಲ್ಲಿ 1,317 ಪ್ರಶಿಕ್ಷಣಾರ್ಥಿಗಳು, 956 ಅಧಿಕಾರಿಗಳಿಗೆ ಇಲ್ಲಿ ತರಬೇತಿ ನೀಡಲಾಗಿದೆ ಎಂದರು. ಪ್ರಶಿಕ್ಷಣಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಎಸ್‌ಪಿ ಡಾ| ಅರುಣ್ ಭಾಗವಹಿಸಿದ್ದರು. ತರಬೇತಿ ಶಾಲೆಯ ಕಾನೂನು ಅಧಿಕಾರಿ ಕೆ.ಎಸ್.ಸತೀಶ್ ಸ್ವಾಗತಿಸಿದರು. ಪೊಲೀಸ್ ಉಪಾಧೀಕ್ಷಕ ಶ್ರೀನಿವಾಸ ವಿ. ಯಾದವ್ ವಂದಿಸಿದರು. ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದ ಪರೇಡ್ ಕಮಾಂಡರ್ ದರ್ಶನ್ ಎಸ್.ಎಸ್. ನೇತೃತ್ವದಲ್ಲಿ ನಿರ್ಗಮನ ಪಥಸಂಚಲನ ಆಕರ್ಷಕವಾಗಿ ಮೂಡಿಬಂದಿತು.