Advertisement
371 ವಲಸೆ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಜಿಲ್ಲೆಯಲ್ಲಿ ವ್ಯಾಸಂಗ ಮಾಡಿ, ಬೇರೆ ಜಿಲ್ಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು 248. ಸಾರಿಗೆ ವ್ಯವಸ್ಥೆ ಇಲ್ಲದ ವಿದ್ಯಾರ್ಥಿಗಳಿಗೆ ಖಾಸಗಿ ಶಾಲೆಯ 197 ವಾಹನಗಳನ್ನು ಬಳಸಿಕೊಳ್ಳುವ ಮೂಲಕ ಒಟ್ಟು 215 ಮಾರ್ಗಗಳನ್ನು ಗುರುತಿಸಲಾಗಿದೆ. ಪ್ರತಿ ವಿದ್ಯಾರ್ಥಿಗೆ ತಲಾ ಎರಡು ಮಾಸ್ಕ್ ಗಳನ್ನು ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ದಾನಿಗಳಿಂದ ಪಡೆದು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಕೋವಿಡ್-19 ಲಕ್ಷಣಗಳುಳ್ಳ ವಿದ್ಯಾರ್ಥಿಗಳಿಗೆ ಎನ್-95 ಮಾಸ್ಕ್ ಗಳನ್ನು ವಿತರಿಸಿ ಪ್ರತಿ ಕೇಂದ್ರಕ್ಕೆ ತಲಾ 10 ಮಾಸ್ಕ್ ಗಳನ್ನು ಕಾಯ್ದಿರಿಸಲಾಗಿದೆ. ಪ್ರತಿ ಕೇಂದ್ರಕ್ಕೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ 6 ಲೀಟರ್ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ 2 ರಿಂದ 3 ಥರ್ಮಲ್ ಸ್ಕ್ಯಾನರ್‌ಗಳನ್ನು ಮಂಡಳಿಯಿಂದ ಸರಬರಾಜು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Advertisement
ಕೋಟೆನಾಡಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ
03:36 PM Jun 24, 2020 | Naveen |