Advertisement
ಇಲ್ಲಿನ ಮುರುಘಾಮಠದ ಅಲ್ಲಮಪ್ರಭು ಸಂಶೋಧನಾ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಎಸ್ಸಿ-ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ, ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಶರಣರು ಆಶೀರ್ವಚನ ನೀಡಿದರು.
Related Articles
Advertisement
ಹಿರಿಯ ಪತ್ರಕರ್ತ, ವೈಚಾರಿಕ ಚಿಂತಕ ಡಿ. ಉಮಾಪತಿ ರಾಜ್ಯ ಮಟ್ಟದ ಬಿ. ರಾಚಯ್ಯ ಪ್ರಶಸ್ತಿ ಸ್ಪೀಕರಿಸಿ ಮಾತನಾಡಿ, ಪತ್ರಕರ್ತನಾಗಿ ಕೆಲಸ ಮಾಡುತ್ತಿರುವ ನನ್ನನ್ನು ಕರೆಸಿ ಸರಳ, ಸಜ್ಜನ, ಶುದ್ಧಹಸ್ತ ರಾಚಯ್ಯನರ ಹೆಸರಿನಲ್ಲಿ ಪ್ರಶಸ್ತಿ ನೀಡಿ ಸನ್ಮಾನ ಮಾಡಿದ್ದಾರೆ. ಅತ್ಯಂತ ಖುಷಿಯಿಂದ ಸ್ವೀಕರಿಸಿದ್ದೇನೆ ಎಂದು ಹೇಳಿದರು.
ಇದುವರೆಗೆ ಆಡಳಿತ ಮಾಡಿದ ಎಲ್ಲ ಸರ್ಕಾರಗಳು ಆಷಾಡಭೂತಿತನವನ್ನು ಪ್ರದರ್ಶಿಸಿವೆ. ಅಂಬೇಡ್ಕರ್ ಆಶಯವಾಗಿದ್ದ ಅಸ್ಪ್ರಶ್ಯತೆ-ಅಸಮಾನತೆಯನ್ನು ಹೋಗಲಾಡಿಸಲು ಯಾವುದೇ ರಾಜಕೀಯ ಪಕ್ಷಗಳಿಂದ ಸಾಧ್ಯವಾಗಿಲ್ಲ. ದಲಿತರು, ಅಲ್ಪಸಂಖ್ಯಾತರು, ಆದಿವಾಸಿಗಳು ಹಾಗೂ ರೈತರನ್ನು ಮಾಧ್ಯಮಗಳು ನಿರ್ಲಕ್ಷಿಸುತ್ತಿವೆ. ಧ್ವನಿ ಗಾರುಡಿಗ ರಾಜಕಾರಣ ನಡೆಯುತ್ತಿದೆ. ಎಸ್ಸಿ-ಎಸ್ಟಿಗಳ ಪತ್ರಿಕೆಗಳು ಗುಣಮಟ್ಟದಿಂದ ಹೊರಬರಬೇಕಾದರೆ ಕಸುಬುದಾರಿಕೆ, ಪ್ರಾಮಾಣಿಕತೆ, ವೃತ್ತಿ ನಿಷ್ಠೆ ಇರಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಎಸ್ಸಿ-ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಕೆರಗೋಡು ಪ್ರಾಸ್ತಾವಿಕವಾಗಿ ಮಾತನಾಡಿ, ಎಸ್ಸಿ-ಎಸ್ಟಿ ಪತ್ರಿಕೆಗಳಿಗೆ ನೀಡುವ ಒಂದು ಪುಟದ ಜಾಹೀರಾತನ್ನು ಎರಡು ಪುಟಗಳಿಗೆ ಹೆಚ್ಚಿಸಬೇಕು. ಹತ್ತು ವರ್ಷ ಪೂರೈಸಿರುವ ಪತ್ರಿಕೆಗಳಿಗೆ ನೀಡುತ್ತಿರುವ ಅರ್ಧ ಪುಟ ಜಾಹಿರಾತನ್ನು ಪೂರ್ಣಪುಟಕ್ಕೆ ಏರಿಸಿ ಶೇ. 25 ರಷ್ಟು ಹೆಚ್ಚುವರಿ ಬಿಲ್ ಪಾವತಿಸಬೇಕು. ವಾರ್ತಾ ಇಲಾಖೆಯವರ ಕಿರುಕುಳ ತಪ್ಪಿಸಿ ಮೂರು ತಿಂಗಳಿಗೊಮ್ಮೆ ವಾರ್ತಾ ಇಲಾಖೆಯಿಂದ ಪತ್ರಿಕೆ ಜಾಹೀರಾತು ಬಿಲ್ ಕೊಡಿಸಬೇಕು. ಜಾಹೀರಾತು ಏಜೆನ್ಸಿಯವರು ವರ್ಷವಾದರೂ ಬಿಲ್ ಕೊಡಲ್ಲ. ಅಂತಹ ಏಜೆನ್ಸಿಗಳನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ವಾರ್ತಾ ಇಲಾಖೆ ನಿರ್ದೇಶಕರಲ್ಲಿ ಮನವಿ ಮಾಡಿದರು.
ಸಂಘದ ವತಿಯಿಂದ ನೀಡುವ ರಾಜ್ಯ ಮಟ್ಟದ ವಾರ್ಷಿಕ ಪ್ರಶಸ್ತಿಯನ್ನು ಹಿರಿಯ ಸಂಪಾದಕ ಶಂಕರಪ್ಪ ಹುಸನಪ್ಪ ಛಲವಾದಿ ಅವರಿಗೆ ಪ್ರದಾನ ಮಾಡಲಾಯಿತು. ಎಸ್ಸಿ-ಎಸ್ಟಿ ಪತ್ರಿಕೆಗಳ ಸಂಪಾದಕರ ಸಂಘದ
ಅಧ್ಯಕ್ಷ ಚೆಲುವರಾಜು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಶ. ಮಂಜುನಾಥ್, ವಾರ್ತಾ ಇಲಾಖೆ ನಿರ್ದೇಶಕ ಭೃಂಗೇಶ್, ವಾರ್ತಾಧಿಕಾರಿ ಬಿ. ಧನಂಜಯಪ್ಪ, ಎಸ್ಸಿ-ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ಉಪಾಧ್ಯಕ್ಷರಾದ ಅನೂಪ್‌ಕುಮಾರ್, ಸುರೇಶ್ ಸಿಂಧೆ, ಸಹ ಕಾರ್ಯದರ್ಶಿ ಮೈಲಾರಪ್ಪ, ಕಾರ್ಯಕ್ರಮ ಸಂಚಾಲಕರಾದ ಡಿ.ಎನ್. ಮೈಲಾರಪ್ಪ, ಜಿ.ಒ.ಎನ್. ಮೂರ್ತಿ, ಎಂ.ಕೆ.ಪ್ರಕಾಶ್, ಗೊಂಡಬಾಳ್ ಬಸವರಾಜ್, ಗಣೇಶ್ ಇದ್ದರು.