Advertisement

ಚಿತ್ರದುರ್ಗ: ಖಾಸಗಿ ಬಸ್ ಪಲ್ಟಿ, ಹತ್ತು ಜನರಿಗೆ ಗಾಯ

08:45 AM Feb 20, 2020 | Mithun PG |

ಚಿತ್ರದುರ್ಗ: ನಗರದ ಹೊರವಲಯದ ಕುಂಚಿಗನಾಳ್ ಕಣಿವೆ ಬಳಿ ಬುಧವಾರ ಮುಂಜಾನೆ 2 ಗಂಟೆ ಸುಮಾರಿಗೆ ಖಾಸಗಿ ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 10 ಜನರಿಗೆ‌ ಗಾಯಗೊಂಡಿದ್ದಾರೆ.

Advertisement

ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ವೋಲ್ವೋ ಬಸ್ ಚಿತ್ರದುರ್ಗ ತಾಲೂಕಿನ ಕುಂಚಿಗನಾಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಲಾರಿಗೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡು ಡಿವೈಡರ್ ದಾಟಿ ಬಂದು ಪಲ್ಟಿಯಾಗಿದೆ.

ಘಟನೆಯಲ್ಲಿ ಮೂರು ಜನ ಗಂಭೀರ ಗಾಯಗೊಂಡಿದ್ದು, 10 ಜನ ಗಾಯಾಳುಗಳಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next