Advertisement

ಪ್ಲಾಸ್ಟಿಕ್‌ ಮುಕ್ತ ಸಮಾಜ ನಿರ್ಮಿಸಿ

11:35 AM Jun 19, 2019 | Team Udayavani |

ಚಿತ್ರದುರ್ಗ: ಪ್ಲಾಸ್ಟಿಕ್‌ ತ್ಯಾಜ್ಯಗಳಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಪರಿಸರ ಹಾಳು ಮಾಡುವ ಪ್ಲಾಸ್ಟಿಕ್‌ ಮುಂತಾದ ತ್ಯಾಜ್ಯ ವಸ್ತುಗಳ ಬಳಕೆ ಮಾಡದಂತೆ ಶಿಕ್ಷಕರು ಹಾಗೂ ಪೋಷಕರು ಮಕ್ಕಳಲ್ಲಿ ಜಾಗೃತಿ ಮೂಡಿಸಿ ಪ್ಲಾಸ್ಟಿಕ್‌ ಮುಕ್ತ ಸಮಾಜ ನಿರ್ಮಿಸಬೇಕು ಎಂದು ಜಿಲ್ಲಾಕಾರಿ ವಿನೋತ್‌ ಪ್ರಿಯಾ ಕರೆ ನೀಡಿದರು.

Advertisement

ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಲಾಚೈತನ್ಯ ಸೇವಾ ಸಂಸ್ಥೆ ಹಾಗೂ ಬೇದ್ರೆ ಆರ್ಟ್ಸ್ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ-2019ರ ಅಂಗವಾಗಿ ಮಂಗಳವಾರ ಅಂತರ ಶಾಲಾ ಮಕ್ಕಳಿಗೆ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ಲಾಸ್ಟಿಕ್‌ ಮುಕ್ತ ಸಮಾಜ ನಿರ್ಮಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಏಕೆಂದರೆ ಶಿಕ್ಷಕರ ಹೇಳಿಕೆಗಳನ್ನು ಮಕ್ಕಳು ಗಂಭೀರವಾಗಿ ಪರಿಗಣಿಸುತ್ತಾರೆ ಹಾಗೂ ಅದರಂತೆ ನಡೆದುಕೊಳ್ಳುತ್ತಾರೆ. ಪೋಷಕರು ಸಹ ಮಕ್ಕಳಿಗೆ ಪ್ಲಾಸ್ಟಿಕ್‌ ದುಷ್ಪರಿಣಾಮದ ಮನವರಿಕೆ ಮಾಡಿಕೊಡಬೇಕಿದೆ. ಮಕ್ಕಳು ಪ್ಲಾಸ್ಟಿಕ್‌ಬಳಕೆ ತ್ಯಜಿಸಿದಲ್ಲಿ ಪರಿಸರ ಉಳಿಸುವ ಕಾರ್ಯಕ್ಕೆ ಹೆಚ್ಚಿನ ಸಹಕಾರ ದೊರೆಯಲಿದೆ ಎಂದರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್‌.ವೈ. ವಟವಟಿ ಮಾತನಾಡಿ, ಪೋಷಕರು ಹಾಗೂ ಶಿಕ್ಷಕರು, ಮಕ್ಕಳನ್ನು ಪ್ರವಾಸಕ್ಕೆಂದು ಕರೆದುಕೊಂಡು ಹೋಗುತ್ತಾರೆ. ಅಲ್ಲಿನ ಸಂಪದ್ಭರಿತ ಗಿಡ, ಮರಗಳು, ಪ್ರಾಣಿ, ಪಕ್ಷಿಗಳನ್ನು ನೋಡಿ ಮನಸ್ಸು ಉಲ್ಲಾಸಗೊಳ್ಳುತ್ತದೆ. ಅಂಥದ್ದೇ ವಾತಾವರಣವನ್ನು ನಮ್ಮ ಸುತ್ತ ಮುತ್ತ ಕೂಡ ನಿರ್ಮಿಸಿಕೊಳ್ಳಲು ಸಾಧ್ಯವಿದೆ. ಪರಿಸರವನ್ನು ಹಸಿರೀಕರಣದಿಂದ ಕಂಗೊಳಿಸುವಂತೆ ಮಾಡಿದಲ್ಲಿ ಆಹ್ಲಾದಕರ ವಾತಾವರಣವನ್ನು ಹುಡುಕಿಕೊಂಡು ಬೇರೆಡೆ ಹೋಗುವ ಅವಶ್ಯಕತೆಯೇ ಬರುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಹಿರಿಯ ಪರಿಸರ ಅಧಿಕಾರಿ ಸಿ.ಡಿ. ಕುಮಾರ್‌, ಪರಿಸರ ತಜ್ಞ ಡಾ| ಎಚ್.ಕೆ.ಎಸ್‌. ಸ್ವಾಮಿ, ಚಿತ್ರ ಕಲಾವಿದ ನಾಗರಾಜ ಬೇದ್ರೆ, ವಿಜ್ಞಾನ ಕಾಲೇಜು ಉಪನ್ಯಾಸಕ ಪ್ರೊ| ಕೆ.ಕೆ. ಕಾಮಾನಿ ಭಾಗವಹಿಸಿದ್ದರು. ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಕಿಶನ್‌, ಆಕಾಶ್‌, ಶ್ರಾವಣಿ, ಹೇಮಂತ್‌ ನಾಯ್ಕ, ರಂಗೇಗೌಡ ಅವರಿಗೆ ಬಹುಮಾನ ವಿತರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next