Advertisement

ಮತದಾರ ಪಟ್ಟಿ ಪರಿಷ್ಕರಣೆ ವರದಿ ಸಲ್ಲಿಸಿ

12:40 PM Dec 27, 2019 | |

ಚಿತ್ರದುರ್ಗ: ಮತಗಟ್ಟೆಗಳಿಗೆ ತಹಶೀಲ್ದಾರರು ಖುದ್ದು ಭೇಟಿ ನೀಡಿ ಬಿಎಲ್‌ಒಗಳ ಕಾರ್ಯವೈಖರಿ ಪರಿಶೀಲಿಸಿ ವರದಿ ಸಲ್ಲಿಸಬೇಕು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ ಹಾಗೂ ಮತದಾರರ ಪಟ್ಟಿ ವೀಕ್ಷಕ ಮಹೇಶ್ವರ ರಾವ್‌, ತಹಶೀಲ್ದಾರರಿಗೆ ಸೂಚಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ವಿಧಾನಸಭೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ತಹಶೀಲ್ದಾರರು ದಿನಕ್ಕೆ ಕನಿಷ್ಠ 40 ಬಿಎಲ್‌ಒಗಳ ಕಾರ್ಯದ ಬಗ್ಗೆ ಗಮನ ಹರಿಸಬೇಕು. ಹಾಗೂ ಅವರಿಂದ ಮತದಾರರ ಮತಪಟ್ಟಿ ಪರಿಷ್ಕರಣೆ ಕುರಿತ ಅಭಿಪ್ರಾಯ ಸಂಗ್ರಹಿಸಬೇಕು. ಅದೇ ರೀತಿ ಉಪವಿಭಾಗಾಧಿ ಕಾರಿಗಳು ಒಂದು ವಾರದಲ್ಲಿ ಜಿಲ್ಲೆಯ ಮೂರು ತಾಲೂಕುಗಳಿಗೆ ಹಾಗೂ ಅಪರ ಜಿಲ್ಲಾಧಿಕಾರಿಗಳು ಮೂರು ತಾಲೂಕುಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ಕಾರ್ಯದ ಬಗ್ಗೆ ವರದಿ ತಯಾರಿಸಬೇಕು ಎಂದರು.

ಜಿಲ್ಲಾಧಿಕಾರಿ ಆರ್‌. ವಿನೋತ್‌ ಪ್ರಿಯಾ ಮಾತನಾಡಿ, ಜಿಲ್ಲೆಯಲ್ಲಿ 13,43,207 ಮತದಾರರಿದ್ದಾರೆ. ನಗರ ಪ್ರದೇಶದಲ್ಲಿ 276 ಹಾಗೂ ಗ್ರಾಮೀಣ ಪ್ರದೇಶದಲ್ಲಿ 1372 ಮತಗಟ್ಟೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 1648 ಮತಗಟ್ಟೆಗಳನ್ನು ಗುರುತಿಸಲಾಗಿದೆ. ಬಿಎಲ್‌ಒ, ಶಿಕ್ಷಕರು ಹಾಗೂ ಶಿಕ್ಷಕೇತರ ವೃಂದದ 1648 ಜನರನ್ನು ಆಯ್ಕೆ ಮಾಡಿದ್ದು, ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು, ಪಟ್ಟಿಯಿಂದ ಹೆಸರು ತೆಗೆಯುವ ಕುರಿತು ಜಿಲ್ಲೆಯ ಆರು ತಾಲೂಕುಗಳ ಬಿಎಲ್‌ಗ‌ಳಿಗೆ ತರಬೇತಿ ನೀಡಲಾಗಿದೆ ಎಂದರು.

ಪಟ್ಟಿಗೆ ಮತದಾರರನ ಹೆಸರು ನೋಂದಾಯಿಸುವ ಬಗ್ಗೆ ಯಾವುದಾದರೂ ತೊಂದರೆಗಳಿದ್ದರೆ ಗಮನಿಸಬೇಕು. ತಹಶೀಲ್ದಾರರು ಅದನ್ನು ಚುನಾವಣಾ ಶಾಖೆಗೆ ನೀಡಬೇಕು. ಜಿಲ್ಲೆಯಲ್ಲಿ ಮತದಾರರ ನೋಂದಣಿ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಜಿಲ್ಲಾ ಸ್ವೀಪ್‌ ಸಮಿತಿ ಮುಖ್ಯಸ್ಥರಾಗಿರುವ ಜಿಪಂ ಸಿಇಒ ಕೈಗೊಂಡಿರುವ ಕಾರ್ಯಕ್ರಮಗಳ ಬಗ್ಗೆ ಎರಡು ದಿನಗಳಲ್ಲಿ ಸಂಪೂರ್ಣ ವರದಿ ಸಲ್ಲಿಕೆಯಾಗಬೇಕು ಎಂದು ತಿಳಿಸಿದರು.

Advertisement

ಸಭೆಯಲ್ಲಿ ಅಪರ ಜಿಲ್ಲಾಧಿ ಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ವಿ. ಪ್ರಸನ್ನ ಸೇರಿದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next