Advertisement
ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಡಿ.16 ರಿಂದ ಜ.15ರವರೆಗೂ ನಡೆದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯಲ್ಲಿ ಹೊಸದಾಗಿ ಹೆಸರು ಸೇರ್ಪಡೆಗೆ 20,731 ಅರ್ಜಿ, ಹೆಸರು ತೆಗೆದು ಹಾಕಲು-8751, ತಿದ್ದುಪಡಿ-6488, ಕ್ಷೇತ್ರ ವ್ಯಾಪ್ತಿಯೊಳಗೆ ಸ್ಥಳಾಂತರಕ್ಕಾಗಿ 1139 ಅಸೇರಿ ಒಟ್ಟು 37,109 ಅರ್ಜಿಗಳು ಸ್ವೀಕೃತಗೊಂಡಿವೆ ಎಂದರು.
Related Articles
Advertisement
ಕನ್ನಡ ತಂತ್ರಾಂಶ ಸಮಸ್ಯೆ ಪರಿಹಾರಕ್ಕೆ ಕ್ರಮ: ಆನ್‌ಲೈನ್‌ನಲ್ಲಿ ಮತದಾರರ ಹೆಸರು ಸೇರ್ಪಡೆಗೆ ಕೇವಲ 372 ಅರ್ಜಿಗಳು, ತೆಗೆದು ಹಾಕಲು-27, ತಿದ್ದುಪಡಿ-623, ಸ್ಥಳಾಂತರಕ್ಕೆ 34 ಸೇರಿದಂತೆ ಒಟ್ಟು 1056 ಅರ್ಜಿಗಳು ಸಲ್ಲಿಕೆಯಾಗಿವೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕನ್ನಡ ಭಾಷೆಯಲ್ಲಿ ವಿವರಗಳನ್ನು ನಮೂದಿಸಲು ಸಾಫ್ಟ್‌ವೇರ್‌ನಲ್ಲಿ ಸಮಸ್ಯೆಯಾಗುತ್ತಿದೆ ಎಂದು ದೂರು ಬಂದಿವೆ ಎಂದು ಜಿಲ್ಲಾ ಧಿಕಾರಿ ಗಮನಕ್ಕೆ ತಂದರು.
ಪ್ರತಿಕ್ರಿಯಿಸಿದ ಮಹೇಶ್ವರರಾವ್, ಆನ್‌ಲೈನ್‌ನಲ್ಲಿ ಕನ್ನಡ ಭಾಷೆಯಲ್ಲಿ ಅರ್ಜಿ ಭರ್ತಿ ಮಾಡಲು ಇರುವ ತೊಂದರೆ ನಿವಾರಣೆಗೆ ಸಾಫ್ಟ್‌ವೇರ್ ಸುಧಾರಿಸುವಂತೆ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲು ಸಲಹೆ ನೀಡಿದರು. 13,43,207 ಮತದಾರರು: ಜಿಲ್ಲೆಯಲ್ಲಿಸದ್ಯ 13,43,207 ಮತದಾರರರಿದ್ದು, 1648 ಮತಗಟ್ಟೆಗಳಿವೆ. ಪುರುಷ-6,75,771, ಮಹಿಳೆ-6,67,348 ಹಾಗೂ ಇತರೆ-88 ಮತದಾರರಿದ್ದಾರೆ. ಹೊಸದಾಗಿ ಸಲ್ಲಿಸಲಾಗಿರುವ
20731 ಅರ್ಜಿಗಳ ಪರಿಶೀಲನೆ ಕಾರ್ಯ ನಡೆಯುತ್ತಿದ್ದು, ಈಗಾಗಲೆ ಡಾಟಾ ಎಂಟ್ರಿ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾ ಧಿಕಾರಿ ವಿನೋತ್ ಪ್ರಿಯಾ ಮಾಹಿತಿ ನೀಡಿದರು. ಪ್ರತಿಜ್ಞಾ ವಿಧಿ ಸ್ವೀಕಾರ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಅಪರ ಜಿಲ್ಲಾ ಧಿಕಾರಿ ಸಂಗಪ್ಪ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಜಿಲ್ಲೆಯ ಮತದಾರರ ಪಟ್ಟಿ ವೀಕ್ಷಕ ಅಧಿ ಕಾರಿ ಮಹೇಶ್ವರ ರಾವ್, ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ಜಿಪಂ ಸಿಇಒ ಸತ್ಯಭಾಮಾ, ಅಪರ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ಪ್ರಸನ್ನ, ಪೌರಾಯುಕ್ತ ಜೆ.ಟಿ. ಹನುಮಂತರಾಜು, ಚುನಾವಣಾ ವಿಭಾಗದ ಸಂತೋಷ್, ತಹಶೀಲ್ದಾರರು ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.