Advertisement
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ತ್ತೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ಇತ್ತೀಚಿನ ದಿನಗಳಲ್ಲಿ ಪರಿಶಿಷ್ಟರ ಮನೋ ಭಾವದಲ್ಲೂ ಬದಲಾವಣೆಯಾಗಿದ್ದು, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಸರ್ಕಾರ ಪರಿಶಿಷ್ಟರಿಗಾಗಿಯೇ ಅನುದಾನದಲ್ಲಿ ಶೇ. 22.75 ರಷ್ಟು ಮೀಸಲಿಡುತ್ತಿದ್ದು, ಪರಿಶಿಷ್ಟರ ಕಾಲೋನಿಗಳಿಗೆ ಉತ್ತಮ ರಸ್ತೆ, ಚರಂಡಿ, ಮೂಲ ಸೌಕರ್ಯ, ಉತ್ತಮ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಮಕ್ಕಳಿಗೆ ಉಚಿತ ಹಾಗೂ ಉತ್ತಮ ಶಿಕ್ಷಣ ನೀಡಲಾಗುತ್ತಿದ್ದು, ಹಾಸ್ಟೆಲ್ಗಳ ಸೌಲಭ್ಯವನ್ನು ಅತ್ಯುತ್ತಮವಾಗಿ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಕೆ. ಅರುಣ್ ಮಾತನಾಡಿ, ಗ್ರಾಮಗಳಲ್ಲಿ ಎಲ್ಲ ವರ್ಗದವರೂ ಸೌಹಾರ್ದಯುತವಾಗಿ ಬಾಳಬೇಕು. ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಸಮಿತಿ ಸದಸ್ಯ ಅರುಣ್‌ಕುಮಾರ್ ಮಾತನಾಡಿ, ಚಳ್ಳಕೆರೆ, ಮೊಳಕಾಲ್ಮೂರು ತಾಲೂಕುಗಳ ಗಡಿ ಭಾಗಗಳಲ್ಲಿ ಈಗಲೂ ಅಸ್ಪ್ರಶ್ಯತೆ ಜೀವಂತವಾಗಿದೆ. ಅಧಿಕಾರಿಗಳು ಈ ಗ್ರಾಮಗಳತ್ತ ಗಮನ ಹರಿಸಿ ಶೋಷಣೆಯನ್ನು ತಪ್ಪಿಸಬೇಕು. ಬಾಧಿತರಿಗೆ ಪರಿಹಾರ ಹಾಗೂ ಸೌಲಭ್ಯ ಒದಗಿಸಬೇಕು. ಗಡಿ ಗ್ರಾಮಗಳಲ್ಲಿ ಪರಿಶಿಷ್ಟರ ರಕ್ಷಣೆಗಾಗಿ ಇರುವ ಕಾನೂನು ಹಾಗೂ ಸೌಲಭ್ಯಗಳ ಕುರಿತು ಹೆಚ್ಚಿನ ಅರಿವು ಮೂಡಿಸುವ ಕಾರ್ಯ ಆಗಬೇಕಿದೆ ಎಂದು ಒತ್ತಾಯಿಸಿದರು.
ಸಭೆಯಲ್ಲಿ ಡಿವೈಎಸ್‌ಪಿ ವಿಜಯಕುಮಾರ್ ಸಂತೋಷ್, ನಗರಸಭೆ ಪೌರಾಯುಕ್ತ ಚಂದ್ರಪ್ಪ, ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
41.90 ಲಕ್ಷ ರೂ. ಪರಿಹಾರ ವಿತರಣೆ2019-20ನೇ ಸಾಲಿನಲ್ಲಿ ಪರಿಶಿಷ್ಟರ ಮೇಲಿನ ಕೊಲೆ-1, ಅತ್ಯಾಚಾರ-2, ಜಾತಿ ನಿಂದನೆ-17 ಸೇರಿದಂತೆ ಒಟ್ಟು 20 ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 41.90 ಲಕ್ಷ ರೂ. ಗಳ ಪರಿಹಾರಧನವನ್ನು ಸಂತ್ರಸ್ತರಿಗೆ ವಿತರಿಸಲಾಗಿದೆ. 34 ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇವೆ ಎಂದು ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್ ಮಾಹಿತಿ ನೀಡಿದರು.