ಚಿತ್ರದುರ್ಗ: ಡಾ| ಸ್ವಾಮಿನಾಥನ್ ವರದಿ ಶಿಫಾರಸು ಜಾರಿಗೊಳಿಸಬೇಕು ಹಾಗೂ 60 ವರ್ಷ ಮೇಲ್ಪಟ್ಟ ರೈತರಿಗೆ 10 ಸಾವಿರ ರೂ. ಮಾಸಾಶನ ನೀಡಬೇಕು ಎಂದು ಒತ್ತಾಯಿಸಿ ಸಿಪಿಐ ಜಿಲ್ಲಾ ಘಟಕದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.
ರೈತರಿಗೆ ನೆರವಾಗುವ ಡಾ. ಸ್ವಾಮಿನಾಥನ್ ವರದಿಯ ಶಿಫಾರಸುಗಳನ್ನು ಸಂಪೂರ್ಣವಾಗಿ ಜಾರಿಗೆ ತರಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನಲ್ಲಿ ಭೀಕರ ಬರಗಾಲವಿದ್ದು ಹತ್ತು- ಹದಿನೈದು ದಿನಗಳಿಗೊಮ್ಮೆ ಟ್ಯಾಂಕರ್‌ನಲ್ಲಿ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಉತ್ತರ ಕರ್ನಾಟಕದಲ್ಲಿ ನೆರೆ ಹಾವಳಿಯಿಂದ ಸಾವಿರಾರು ಜನ ನಿರ್ಗತಿಕರಾಗಿದ್ದಾರೆ. ಇದರ ಪರಿವೆಯಿಲ್ಲದ ಬಿಜೆಪಿ ಸರ್ಕಾರದಲ್ಲಿ ಖಾತೆಗಳ ಹಂಚಿಕೆಗಾಗಿ ಕಸರತ್ತು ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅರಣ್ಯ ಹಕ್ಕು ಸಮಿತಿಯಲ್ಲಿ ಮೊಳಕಾಲ್ಮೂರು ತಾಲೂಕಿನಲ್ಲಿ ತಿರಸ್ಕೃತ ಗೊಂಡಿರುವ ಅರ್ಜಿಗಳನ್ನು ಉಪವಿಭಾಗಾಧಿಕಾರಿಗಳು ಮರುಪರಿಶೀಲಿಸಿ ನ್ಯಾಯ ಒದಗಿಸಬೇಕು. ಮೊಳಕಾಲ್ಮೂರು ತಾಲೂಕಿನ ರಾಂಪುರ ಸನಂ 47, ದಗಡೂರು ಸನಂ 23 ಮತ್ತು ಬಸಾಪುರ ಸನಂ 14ರ ಕಂದಾಯ ಅಥವಾ ಅರಣ್ಯ ಜಮೀನು ಎಂಬುದನ್ನು ಜಂಟಿ ಸರ್ವೆ ನಡೆಸಿ ಬೇರ್ಪಡಿಸಿ ನ್ಯಾಯ ಒದಗಿಸಬೇಕು ಎಂದರು.
ಪ್ರಮುಖ ಬೇಡಿಕೆಗಳು
ಸಿಪಿಐ ಜಿಲ್ಲಾ ಸಹ ಕಾರ್ಯದರ್ಶಿ ಜಿ.ಸಿ. ಸುರೇಶ್‌ಬಾಬು, ಕಾರ್ಯದರ್ಶಿ ಸಿ.ವೈ. ಶಿವರುದ್ರಪ್ಪ, ಖಜಾಂಚಿ ಟಿ. ಸೂರಯ್ಯ, ಜಾಫರ್ ಷರೀಫ್, ದೊಡ್ಡಉರ್ತಿ ಕರಿಯಣ್ಣ, ಕೆ.ಇ. ಸತ್ಯಕೀರ್ತಿ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.