Advertisement

ಪಠ್ಯಪುಸ್ತಕಕ್ಕೆ 20 ಲಕ್ಷ ಅನುದಾನ ನೀಡುವೆ

03:53 PM Sep 06, 2019 | Team Udayavani |

ಚಿತ್ರದುರ್ಗ: ಪಠ್ಯಪುಸ್ತಕಗಳ ಕೊರತೆ ಕಾರಣಕ್ಕೆ ಜಿಲ್ಲೆಯಲ್ಲಿ ಪಿಯುಸಿ ಫಲಿತಾಂಶ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕರ ನಿಧಿಯಿಂದ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಒದಗಿಸಲಾಗುವುದು ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.

Advertisement

ನಗರದ ತರಾಸು ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ ಹಾಗೂ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶ ದಾಖಲಾಗುತ್ತಿದೆ. ಆದರೆ ದ್ವಿತೀಯ ಪಿಯುಸಿಯಲ್ಲಿ ಹಿನ್ನಡೆ ಆಗುತ್ತಿದೆ. ಇದಕ್ಕೆ ಪಠ್ಯಪುಸ್ತಕಗಳ ಕೊರತೆ ಕಾರಣ ಎಂಬ ದೂರುಗಳು ಬರುತ್ತಿದ್ದು, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಪಠ್ಯಪುಸ್ತಕಗಳಿಗಾಗಿ 20 ಲಕ್ಷ ರೂ. ಅನುದಾನ ಒದಗಿಸುತ್ತೇನೆ ಎಂದರು.

ದೇಶ ಅಭಿವೃದ್ಧಿ ಹೊಂದಲು ಶಿಕ್ಷಕರ ಪಾತ್ರ ಬಹುಮುಖ್ಯ. ವಿದ್ಯಾರ್ಥಿಗಳಿಗೆ ಯಾವುದೇ ವಿಷಯದ ಬಗ್ಗೆ ಮನದಟ್ಟಾಗುವಂತೆ ಬೋಧಿಸಬೇಕು. ವಿದ್ಯಾರ್ಥಿಗಳೊಂದಿಗೆ ಪ್ರೀತಿ, ವಿಶ್ವಾಸದೊಂದಿಗೆ ಬೆರೆತು ಅವರ ಜೀವನದಲ್ಲಿ ಮರೆಯಲಾಗದ ಗುರುಗಳಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್‌ ಮಾತನಾಡಿ, ವಿದ್ಯಾರ್ಥಿಗಳಿಗೆ ಸನ್ಮಾರ್ಗ ಹಾಗೂ ಯಶಸ್ವಿ ಜೀವನದ ದಾರಿ ತೋರುವವರೇ ನಿಜವಾದ ಗುರು. ಜಿಲ್ಲೆ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಉತ್ತಮ

Advertisement

ಸಾಧನೆ ಮಾಡುತ್ತಿದೆ. ಅದೇ ರೀತಿ ಉನ್ನತ ಶಿಕ್ಷಣದಲ್ಲಿಯೂ ಹೆಚ್ಚಿನ ಸಾಧನೆ ಮಾಡಿ ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತೆ ಮಾಡಲು ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಆರ್‌. ವಿನೋತ್‌ ಪ್ರಿಯಾ ಮಾತನಾಡಿ, ಶಿಕ್ಷಕರೆಂದರೆ ಶಾಲಾ ಹಂತದಲ್ಲಿ ಪಾಠ

ಬೋಧಿಸುವವರಷ್ಟೇ ಅಲ್ಲ. ಅಗತ್ಯ ಮಾಹಿತಿ ಮತ್ತು ಮಾರ್ಗದರ್ಶನ ನೀಡುವವರೆಲ್ಲರೂ ಶಿಕ್ಷಕರಾಗಿರುತ್ತಾರೆ. ಒಬ್ಬ ವ್ಯಕ್ತಿಯನ್ನು ಉತ್ತಮ ಪ್ರಜೆಯನ್ನಾಗಿಸುವಲ್ಲಿ ಶಿಕ್ಷಕರ ಪಾತ್ರ ಶೇ. 75 ರಷ್ಟಿದ್ದರೆ, ಉಳಿದ ಶೇ. 25 ಆ ವ್ಯಕ್ತಿಯ ಪ್ರಯತ್ನ ಮಾತ್ರ ಎಂದರು.

ಜಿಲ್ಲಾ ಪಂಚಾಯತ್‌ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಸಿ. ಸತ್ಯಭಾಮ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಡಾ| ಕೆ. ಅನಂತ್‌, ಜಿಪಂ ಸದಸ್ಯರಾದ ಆರ್‌. ಕೃಷ್ಣಮೂರ್ತಿ, ಗುರುಮೂರ್ತಿ, ಆರ್‌. ನರಸಿಂಹರಾಜು, ತಾಪಂ ಉಪಾಧ್ಯಕ್ಷೆ ಶಾಂತಮ್ಮ, ಡಿಡಿಪಿಐ ರೇವಣಸಿದ್ದಪ್ಪ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಗದೀಶ್‌ ಮೊದಲಾದವರು ಭಾಗವಹಿಸಿದ್ದರು. ಜಿಲ್ಲಾ ಮಟ್ಟದ ‘ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿಗೆ ಭಾಜನರಾದವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next