Advertisement

ಚಿತ್ರದುರ್ಗ:ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು 

08:59 AM Oct 21, 2017 | Team Udayavani |

ಹೊಸದುರ್ಗ: ಇಲ್ಲಿನ ಹೆಗ್ಗೆರೆ ಗ್ರಾಮದಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ನೀರು ಪಾಲಾದ ದಾರುಣ ಘಟನೆ ಶುಕ್ರವಾರ ನಡೆದಿದ್ದು,ಶನಿವಾರ ಮೂವರ ಶವಗಳನ್ನು ಮೇಲಕ್ಕೆತ್ತಲಾಗಿದೆ. 

Advertisement

ನೀರುಪಾಲಾದ ಬಾಲಕರು ಕೆಂಪರಾಜ್‌, ಕಾಂತರಾಜ್‌ ಮತ್ತು ಮಹಾಂತೇಶ್‌ ಎಂದು ಗುರುತಿಸಲಾಗಿದೆ. ಎಲ್ಲರೂ 14 ವರ್ಷ ಪ್ರಾಯದವರು ಎನ್ನಲಾಗಿದೆ. ಶ್ರೀರಾಂಪುರ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಬಾಲಕರ ಶವಗಳನ್ನು ಅಗ್ನಿಶಾಮಕ ದಳದ ಸಿಬಂದಿಗಳು ಕಾರ್ಯಾಚರಣೆ ನಡೆಸಿ ಶವಗಳನ್ನು ಮೇಲಕ್ಕೆತ್ತಲಾಗಿದೆ. ಈ ವೇಳೆ ಸಾವಿರಾರು ಜನರು ಕೆರೆ ದಂಡೆಯಲ್ಲಿ ಜಮಾಯಿಸಿದ್ದರು. ಗ್ರಾಮದಲ್ಲಿ ಸೂತಕದ ಛಾಯೆ ಕಂಡು ಬಂದಿದೆ.ಮೃತ ಬಾಲಕರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. 

Advertisement

Udayavani is now on Telegram. Click here to join our channel and stay updated with the latest news.

Next