Advertisement

ಆಮಿಷಕ್ಕೊಳಗಾಗದೆ ಮತ ಚಲಾಯಿಸಿ

05:39 PM Jan 26, 2020 | Naveen |

ಚಿತ್ರದುರ್ಗ: ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾಯಿಸಿ ಉತ್ತಮ ನಾಯಕನನ್ನು ಆಯ್ಕೆ ಮಾಡಬೇಕು ಎಂದು ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಧೀಶ ಬನ್ನಿಕಟ್ಟೆ ಆರ್‌. ಹನುಮಂತಪ್ಪ ಹೇಳಿದರು.

Advertisement

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಸರ್ಕಾರಿ ವಿಜ್ಞಾನ ಕಾಲೇಜು ಸಹಯೋಗದಲ್ಲಿ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ಶನಿವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮತದಾನ ಹಾಗೂ ಮೂಲಭೂತ ಕರ್ತವ್ಯಗಳ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ವಿವಿಧತೆಯಲ್ಲಿ ಏಕತೆ ಸಾ ಧಿಸುವ ರಾಷ್ಟ್ರ. ಈ ರೀತಿಯ ವೈವಿಧ್ಯತೆ ಕಂಡು ಬರುವುದು ಭಾರತದಲ್ಲಿ ಮಾತ್ರ. ಆದರೆ ಪ್ರಸ್ತುತ ದಿನಗಳಲ್ಲಿ ಜನರು ತಾನು, ತನ್ನ ಕೆಲಸ ಹಾಗೂ ಕುಟುಂಬ ಎಂಬ ಸ್ವಾರ್ಥದಲ್ಲಿ ಬದುಕುತ್ತಿದ್ದಾರೆ. ಇದರಿಂದ ಹೊರಬಂದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದರು.

ಭಾರತೀಯರೆಲ್ಲಾ ಒಂದೇ ತಾಯಿಯ ಮಕ್ಕಳು ಎಂಬ ಮನೋಭಾವದಿಂದ ಬದುಕಬೇಕು.
ಕೋಮುವಾದಕ್ಕೆ ಒಳಗಾಗಬೇಡಿ. 1950ರ ಜ. 25 ರಂದು ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ಆರಂಭಿಸಿತು. ಹೀಗಾಗಿ ಜ. 25 ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಜಾರಿಗೆ ಬಂದಿದೆ ಎಂದು ತಿಳಿಸಿದರು.

ಡಾ| ಬಿ.ಆರ್‌. ಅಂಬೇಡ್ಕರ್‌ರವರು ವಿವಿಧ ದೇಶಗಳ ಸಂವಿಧಾನವನ್ನು ಅಭ್ಯಸಿಸಿ ಸರ್ವವ್ಯಾಪಿ ವಿಚಾರ ಮಾಡಿ ಭಾರತದ ಸಂವಿಧಾನವನ್ನು ರಚಿಸಿದ್ದಾರೆ. ಮತದಾರರು ಜಾತಿಯ ಪರಿಕಲ್ಪನೆಯಿಂದ ಹೊರಬಂದು ರಾಷ್ಟ್ರಸೇವೆ ಮಾಡುವ ಉತ್ತಮ ನಾಯಕರನ್ನು ಆಯ್ಕೆ ಮಾಡಬೇಕು ಎಂದು ಕರೆ ನೀಡಿದರು.

Advertisement

ಚುನಾವಣಾ ತರಬೇತುದಾರ ಡಾ| ಕೆ. ಕೆ. ಕಾಮಾನಿ ಮಾತನಾಡಿ, ಸಂವಿಧಾನದಲ್ಲಿ ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಪ್ರಮುಖ ಅಂಗಗಳಾಗಿವೆ. ಶಾಸಕಾಂಗ ರೂಪಿಸುವ ಶಾಸನದ ಮೇಲೆ ದೇಶದ ಅಭಿವೃದ್ಧಿ ನಿಂತಿರುತ್ತದೆ. ಹಾಗಾಗಿ ಮತದಾರರು ಮತದಾನ ಮಾಡುವುದು ಮುಖ್ಯ. ಅವರು ಅರ್ಹರನ್ನು ಆಯ್ಕೆ ಮಾಡಬೇಕು ಎಂದು ತಿಳಿಸಿದರು.

ಐಕ್ಯೂಇಸಿ ಡಾ| ಆರ್‌.ಎಚ್‌. ರಟಗೇರಿ, ವಕೀಲರ ಸಂಘದ ಉಪಾಧ್ಯಕ್ಷ ಟಿ. ನಾಗೇಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಬಿ.ಎಂ. ಅನಿಲ್‌ಕುಮಾರ್‌, ಸರ್ಕಾರಿ ವಿಜ್ಞಾನ ಕಾಲೇಜು ಪ್ರಾಚಾರ್ಯ ಡಾ| ಬಸವರಾಜಪ್ಪ ಸೇರಿದಂತೆ ಸರ್ಕಾರಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next