ಬೆಂಗಳೂರು: ಕರ್ನಾಟಕ ಚಿತ್ರಕಲಾ ಪರಿಷತ್ ಅನ್ನು ಡೀಮ್ಡ್ ವಿಶ್ವವಿದ್ಯಾನಿಲಯ ಮಾಡುವ ಆಲೋಚನೆ ಸರಕಾರದ ಮುಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಕೊರೊನಾ ಲಾಕ್‌ಡೌನ್ ಪರಿಣಾಮ ಎರಡು ವರ್ಷಗಳ ಅನಂತರ ಕರ್ನಾಟಕ ಚಿತ್ರಕಲಾ ಪರಿಷತ್ ರವಿವಾರ ಹಮ್ಮಿಕೊಂಡಿದ್ದ 19ನೇ ಚಿತ್ರಸಂತೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಚಿತ್ರಕಲಾ ಪರಿಷತ್ ಸ್ವಾಯತ್ತ ಸಂಸ್ಥೆ ಆಗಿದ್ದು, ಅದನ್ನು ಡೀಮ್ಡ್ ವಿವಿಯ ಮಾಡಬೇಕು ಎನ್ನುವ ಬೇಡಿಕೆ ಕೂಡ ಇದೆ. ಇದರ ಕೆಳಗೆ ಹಲವು ಸಂಸ್ಥೆಗಳನ್ನು ತಂದು ಡೀಮ್ಡ್ ವಿವಿ ಮಾಡಲಾಗುವುದು ಎಂದು ತಿಳಿಸಿದರು.
ಜಿಲ್ಲಾವಾರು ಚಿತ್ರಕಲಾ ಗ್ಯಾಲರಿ ಜತೆಗೆ ರಾಜ್ಯದ ಹಲವು ಕಡೆಗಳಲ್ಲಿ ಕಲಾವಿದರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಜಿಲ್ಲಾವಾರು ಚಿತ್ರಕಲಾ ಗ್ಯಾಲರಿ ತೆರೆಯಬೇಕು ಎನ್ನುವ ಮನವಿಯನ್ನು ಪರಿಷತ್ ಮಾಡಿದ್ದು, ಆ ಹಿನ್ನೆಲೆಯಲ್ಲಿ ಚಿತ್ರಕಲಾವಿದರನ್ನು ಬೆಳೆಸುವ ನಿಟ್ಟಿನಲ್ಲಿ ರಾಜ್ಯದ ಆರು ವಲಯಗಳಲ್ಲಿ ಚಿತ್ರಕಲಾ ಗ್ಯಾಲರಿ ಸ್ಥಾಪಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:ಸಿದ್ದರಾಮಯ್ಯ ಹೇಳಿಕೆ ತಿರುಚಿ, ಮಠಾಧೀಶರಿಗೆ ಬಿಜೆಪಿಯಿಂದಲೇ ಅವಮಾನ : ಆಂಜನೇಯ ಆರೋಪ
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ, ಶಾಸಕ ರಿಜ್ವಾನ್ ಅರ್ಷದ್ ಮತ್ತಿತರರು ಉಪಸ್ಥಿತರಿದ್ದರು. ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ| ಬಿ.ಎಲ್. ಶಂಕರ್ ಹೇಳಿದರು.
17 ರಾಜ್ಯಗಳ 1,300ಕ್ಕೂ ಅಧಿಕ ಕಲಾವಿದರು ಈ ಬಾರಿಯ ಚಿತ್ರಸಂತೆಯಲ್ಲಿ ಭಾಗವಹಿಸಿದ್ದಾರೆ.