Advertisement

CM Siddaramaiah ಮೈಸೂರಲ್ಲಿ ಚಿತ್ರನಗರಿ: 110 ಎಕರೆ ಹಸ್ತಾಂತರ

11:02 PM Sep 18, 2024 | Team Udayavani |

ಬೆಂಗಳೂರು: ಮೈಸೂರು ಜಿಲ್ಲೆಯ ಹಿಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸಲು ಈಗಾಗಲೇ ಗುರುತಿಸಿರುವ ಕೆಐಎಡಿಬಿಯ 110 ಎಕರೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಹಸ್ತಾಂತರಿಸಿ, ಹೆಚ್ಚುವರಿಯಾಗಿ 2ನೇ ಹಂತದ ವಿಸ್ತರಣೆಗೆ 50 ಎಕರೆ ಗುರುತಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

Advertisement

ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಚಿತ್ರ ಪ್ರವಾಸೋದ್ಯಮಕ್ಕೂ ಒತ್ತು ನೀಡುವಂತೆ ನಿರ್ದೇಶನ ನೀಡಿದ್ದಾರೆ. ಈ ಕುರಿತ ಎಲ್ಲ ಕೆಲಸಗಳನ್ನು ವೇಗವಾಗಿ ನಡೆಸಲು ಸಿಎಂ ಆದೇಶಿಸಿದ್ದಾರೆ.

ಚಿತ್ರನಗರಿ ನಿರ್ಮಾಣ ಕುರಿತು ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, 2015-16ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದ ಯೋಜನೆಯು ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಮೊದಲ ಹಂತದ ಕಾಮಗಾರಿಯನ್ನು ಕೂಡಲೇ ಆರಂಭಿಸಿ ಎಂದು ತಾಕೀತು ಮಾಡಿದರು.

ಇದನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಟ್ರಾನ್ಸಾಕ್ಷನ್‌ ಅಡ್ವೆ„ಸರ್‌ ನೇಮಕ ಮಾಡಲು ಟೆಂಡರ್‌ ಕರೆಯುವಂತೆಯೂ ಹಾಗೂ ಭೂಮಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ಹಸ್ತಾಂತರ ಮಾಡಿದ ನಂತರ ಪಿಪಿಪಿ ಮಾದರಿಯಲ್ಲಿ ಎಕ್ಸ್‌ಪ್ರೆಷನ್‌ ಆಫ್‌ ಇಂಟರೆಸ್ಟ್ ಕರೆಯಲು ಕ್ರಮ ಕೈಗೊಳ್ಳಬೇಕು.

ಇಂದಿನ ಚಿತ್ರರಂಗಕ್ಕೆ ಅಗತ್ಯವಿರುವ ತಂತ್ರಜ್ಞಾನಗಳನ್ನೊಳಗೊಂಡ ಅತ್ಯಾಧುನಿಕ ಮಾದರಿಯ ಚಿತ್ರನಗರಿ ನಿರ್ಮಿಸಬೇಕು. ಚಿತ್ರನಗರಿಯಲ್ಲಿ ಥಿಯೇಟರ್‌, ಸ್ಟುಡಿಯೋ, ಮಲ್ಟಿಪ್ಲೆಕ್ಸ್‌, ಥೀಮ್‌ ಪಾರ್ಕ್‌, ಹೋಟೆಲ್‌ಗ‌ಳ ನಿರ್ಮಾಣವೂ ಆಗಬೇಕು. ಇದರಿಂದ ಪ್ರವಾಸೋದ್ಯಮಕ್ಕೂ ಹೆಚ್ಚಿನ ಉತ್ತೇಜನ ದೊರೆಯಬೇಕು. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಚಿತ್ರ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಸೂಚಿಸಿದರು.

Advertisement

ಸಭೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧು ಕೋಕಿಲ, ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್‌.ಕೆ. ಅತೀಕ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕ್‌ ಚಂದ್ರ, ಆಯುಕ್ತ ಹೇಮಂತ್‌ ಎಂ. ನಿಂಬಾಳ್ಕರ್‌ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next