ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ 182 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8,292ಕ್ಕೆ ಏರಿಕೆಯಾಗಿದ್ದು, ಇಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಗುರುವಾರ 46 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಗುರುವಾರ ಒಟ್ಟು 1040 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 182 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 8,292ಕ್ಕೆ ಏರಿಕೆಯಾಗಿದ್ದು, ಇದುವರೆಗೆ 39 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 8,004 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 781 ಸಕ್ರಿಯ ಪ್ರಕರಣಗಳು ಇವೆ.
ಇದನ್ನೂ ಓದಿ :ಸ್ಟಾಕ್ ಹೋಮ್: ಅಮೆರಿಕದ ಕವಯತ್ರಿಗೆ ಪ್ರತಿಷ್ಠಿತ ನೊಬೆಲ್ ಸಾಹಿತ್ಯ ಪ್ರಶಸ್ತಿ
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 67,927 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 73,172 ಜನರ ಮಾದರಿ ಸಂಗ್ರಹಿಸಲಾಗಿದ್ದು, 64,277 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 127 ಜನರ ವರದಿ ಬರುವುದು ಬಾಕಿ ಇದೆ. 476 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ತಿಳಿಸಿದ್ದಾರೆ.