Advertisement
ರಾಠೊಡ್ ಅವರಿಗೆ ಶುಕ್ರವಾರ ಬೆಳಗ್ಗೆ ಮಾಡಬೂಳ ಪೊಲೀ ಸರು ಕರೆ ಮಾಡಿ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂದು ಸಹಿ ಮಾಡು ವಂತೆ ಸೂಚಿಸಿದ್ದರು. ಅದರಂತೆ ಮಧ್ಯಾಹ್ನ ಠಾಣೆಗೆ ಹೋದಾಗ ಅವರನ್ನು ಬಂಧಿಸಲಾಗಿದೆ. ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಕಲಗುರ್ತಿ ಗ್ರಾಮದ ಯುವಕ ದೇವಾನಂದ ರಾಮಚಂದ್ರ ಕೊರಬಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆ.23ರಂದು ಚಿತ್ತಾಪುರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವಿಚಾರವನ್ನು ತಿಳಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅವರು ಹಂಚಿಕೊಂಡಿದ್ದ ವೀಡಿಯೋ ವೈರಲ್ ಆಗಿ ಸರಕಾರಕ್ಕೂ ಮುಜುಗುರ ಉಂಟಾ ಗಿತ್ತು. ಈ ಹಿನ್ನೆಲೆಯಲ್ಲಿ ಮಣಿಕಂಠ ಅವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಬುಧವಾರ ಸಂಜೆಯೇ ಠಾಣೆ ಜಾಮೀನಿನಡಿ ಬಿಡುಗಡೆ ಮಾಡಲಾಗಿತ್ತು. ಬಳಿಕ ಮಣಿಕಂಠ ಮಾಧ್ಯಮ ಗಳ ಎದುರು ತಮ್ಮನ್ನು ನಡೆಸಿ ಕೊಳ್ಳುತ್ತಿರುವ ರೀತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನಡೆ ಕುರಿತು ಖಾರವಾದ ಪ್ರತಿ ಕ್ರಿಯೆ ನೀಡಿದ್ದರು. ಇದರ ಬೆನ್ನಲ್ಲೇ ಈಗ ಪುನಃ ಬಂಧಿಸಲಾಗಿದೆ. ಬಂಧನ ಖಂಡಿಸಿ ಚಿತ್ತಾಪುರ ಹಾಗೂ ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.