Advertisement

ಚಿತ್ತಾಪುರ: ಹಿಂದುಳಿದ ವರ್ಗದ ಸದಸ್ಯೆಯರೇ ಇಲ್ಲ!

11:40 AM Mar 13, 2020 | Naveen |

ಚಿತ್ತಾಪುರ: ಪುರಸಭೆಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಕಾಂಗ್ರೆಸ್‌ ಪಕ್ಷದ ಸದಸ್ಯರಲ್ಲಿ ತೀವ್ರ ಸಂಚಲನ ಮೂಡಿದೆ.

Advertisement

ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗದ ಮಹಿಳಾ ಮೀಸಲು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಮೀಸಲಾತಿ ಪ್ರಕಟವಾಗಿದೆ.

ಒಟ್ಟು 23 ಸದಸ್ಯ ಸ್ಥಾನ ಹೊಂದಿರುವ ಪುರಸಭೆಯಲ್ಲಿ ಕಾಂಗ್ರೆಸ್‌ 18, ಬಿಜೆಪಿಯ ಐವರು ಸದಸ್ಯರು ಚುನಾಯಿತರಾಗಿದ್ದಾರೆ. ಆದರೆ ಸ್ಪಷ್ಟ ಬಹುಮತ ಪಡೆದು ಅಧಿಕಾರ ಪಡೆಯುವ ಆಶಯ ಇಟ್ಟುಕೊಂಡಿದ್ದ ಕಾಂಗ್ರೆಸ್‌ನ 18 ಸದಸ್ಯರಲ್ಲಿ ಹಿಂದುಳಿದ ವರ್ಗದ ಮಹಿಳಾ ಸದಸ್ಯೆಯರೇ ಇಲ್ಲದಂತಾಗಿದೆ.

2018 ಅಗಸ್ಟ್‌ 31ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 18 ಸ್ಥಾನಗಳಲ್ಲಿ ಗೆಲುವು ಸಾ ಸುವುದರ ಮೂಲಕ ಚಿತ್ತಾಪುರ ಪುರಸಭೆ ಭದ್ರಪಡಿಸಿಕೊಂಡಿತ್ತು. ಅಲ್ಲದೇ ಬಿಜೆಪಿ ಐದು ಸ್ಥಾನಗಳಲ್ಲಿ ಗೆದ್ದು ಎರಡನೇ ಸ್ಥಾನ ಪಡೆದಿತ್ತು. ಆದರೆ ಬಿಜೆಪಿಯಲ್ಲೂ ಒಬ್ಬರೂ ಹಿಂದುಳಿದ ವರ್ಗದ ಮಹಿಳಾ ಸದಸ್ಯರೇ ಇಲ್ಲ.

ಪಟ್ಟಣದಲ್ಲಿ ಕಳೆದ ಕೆಲವು ದಿನಗಳಿಂದ ರಾಜಕೀಯ ಚಟುವಟಿಕೆಗಳು ಸ್ಥಗಿತವಾಗಿದ್ದವು. ಆಯ್ಕೆಯಾದ ಸದಸ್ಯರು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕಾಗಿ ಮೀಸಲಾತಿ ಪ್ರಕಟವಾಗುವುದನ್ನೇ ಕಾಯುತ್ತಿದ್ದರು. ಆದರೀಗ ಪ್ರಕಟವಾದ ಮೀಸಲಾತಿ ಆಕಾಂಕ್ಷಿಗಳಿಗೆ ನಿರಾಸೆ ಉಂಟು ಮಾಡಿದೆ.

Advertisement

ಕಳೆದ 2013ರಲ್ಲಿ ನಡೆದ ಚುನಾವಣೆಯಲ್ಲೂ ಕಾಂಗ್ರೆಸ್‌ ಪಕ್ಷದ 15 ಸದಸ್ಯರು ಆಯ್ಕೆಯಾಗಿ ಸ್ಪಷ್ಟ ಬಹುಮತ ಪಡೆದಿದ್ದರು. ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮತ್ತು ಉಪಾಧ್ಯಕ್ಷ ಸ್ಥಾನ “ಬಿಸಿಬಿ’ಗೆ ಮೀಸಲಾತಿ ನೀಡಲಾಗಿತ್ತು.

ಕಾಂಗ್ರೆಸ್‌ ಹೈಕಮಾಂಡ್‌ ಸೂಚನೆ ಮೇರೆಗೆ ಮೊದಲ ಅಧ್ಯಕ್ಷರಾಗಿ ಶಿವಕಾಂತ ಬೆಣ್ಣೂರಕರ್‌, ಉಪಾಧ್ಯಕ್ಷರಾಗಿ ನಾಗರಾಜ ಕಡಬೂರ ಅಧಿಕಾರ ನಡೆಸಿದ್ದರು. ಎರಡನೇ ಅವ ಗೆ ಅಧ್ಯಕ್ಷ ಸ್ಥಾನ ಸಾಮಾನ್ಯ (ಮಹಿಳೆ), ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾಗಿತ್ತು. ಅಧ್ಯಕ್ಷರಾಗಿ ಅನ್ನಪೂರ್ಣ ಹೋತಿಮಡಿ, ಉಪಾಧ್ಯಕ್ಷರಾಗಿ ಮಹ್ಮದ್‌ ರಸೂಲ್‌ ಮುಸ್ತಫಾ ಅಧಿಕಾರ ನಡೆಸಿದ್ದರು.

2018ರಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರಲ್ಲಿ ಒಬ್ಬರೂ ಹಿಂದುಳಿದ ವರ್ಗದ ಮಹಿಳಾ ಸದರಿಲ್ಲ. ಹೀಗಾಗಿ ಈ ಬಾರಿಯ ಲೆಕ್ಕಾಚಾರವೇ ತಲೆಕೆಳಗಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next