Advertisement

ನನೆಗುದಿಗೆ ಬಿದ್ದ ಕನ್ನಡ ಭವನಕ್ಕೆ ನಿರ್ದೇಶಕರ ಭೇಟಿ

12:36 PM Jun 12, 2020 | Naveen |

ಚಿತ್ತಾಪುರ: ಪಟ್ಟಣದಲ್ಲಿ ನನೆಗುದಿಗೆ ಬಿದ್ದಿರುವ ಕನ್ನಡ ಭವನ ಕಾಮಗಾರಿ ಸ್ಥಳಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಭೇಟಿ ನೀಡಿ ವಸ್ತುಸ್ಥಿತಿ ಪರಿಶೀಲಿಸಿದರು.

Advertisement

ಕಳೆದ 2013-14ನೇ ಸಾಲಿನಲ್ಲಿ ಮಂಜೂರಿಯಾಗಿದ್ದ ಕನ್ನಡ ಭವನ ಕಾಮಗಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 25 ಲಕ್ಷ ರೂ. ಮತ್ತು 2016-17ನೇ ಸಾಲಿನಲ್ಲಿ 20 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು. ಹೈದ್ರಾಬಾದ್‌ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಪಟ್ಟಣದಲ್ಲಿ ಕನ್ನಡ ಭವನಕ್ಕೆ 2013-14ನೇ ಸಾಲಿನಲ್ಲಿ 20 ಲಕ್ಷ ರೂ. ಮಂಜೂರಾಗಿದೆ. ಈ ಭವನ ಬೇಸಮೆಂಟ್‌ ಹಂತ ದವರೆಗೂ ಬಂದಿದೆ. ಕಾಮಗಾರಿ ಅಪೂರ್ಣವಾಗಿದ್ದರಿಂದ ಪಟ್ಟಣ ದಲ್ಲಿ ಪ್ರತೇಕ ಕನ್ನಡ ಭವನದ ಅವಶ್ಯಕತೆಯಿಲ್ಲ. ಹೀಗಾಗಿ ಅಪೂರ್ಣವಾದ ಕಾಮಗಾರಿ ಪೂರ್ಣಗೊಳಿಸಲು ಕೆಆರ್‌ಐಡಿಎಲ್‌ಗೆ ಅನುದಾನ ಬಿಡುಗಡೆ ಮಾಡಿ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿಗಳು ಕಳೆದ 8 ಜುಲೈ 2019ರಂದು ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಆದರೆ ಇಲ್ಲಿವರೆಗೆ ಅದಕ್ಕೆ ಉತ್ತರ ಬಂದಿಲ್ಲ ಎಂದು ತಿಳಿಸಿದರು.

ಪಟ್ಟಣದಲ್ಲಿ ಕನ್ನಡ ಭವನ ನಿರ್ಮಾಣ ಮಾಡಲು ಮಂಜೂರಿಯಾದ 45 ಲಕ್ಷ ರೂ.ಗಳನ್ನು ಈಗಾಗಲೇ ಪಟ್ಟಣದಲ್ಲಿ ನಿರ್ಮಿಸುತ್ತಿರುವ ಕನ್ನಡ ಭವನಕ್ಕೆ ಬಳಸಿಕೊಳ್ಳಲು ಆದೇಶ ನೀಡಲು ಕೋರಿ ಪತ್ರ ಬರೆಯಲಾಗಿದೆ. ಪ್ರಸ್ತುತ ಬೆಂಗಳೂರಿನ ನಿರ್ದೇಶಕರ ಹಂತದಲ್ಲಿದೆ. ಈ ಕುರಿತು ಶಾಸಕ ಪ್ರಿಯಾಂಕ್‌ ಖರ್ಗೆ ಮತ್ತು ಬೆಂಗಳೂರಿನ ನಿರ್ದೇಶಕರನ್ನು ಭೇಟಿ ನೀಡಿ ವಿಷಯ ಗಮನಕ್ಕೆ ತರಲಾಗುವುದು ಎಂದರು.

ಮೊದಲು ಅನುದಾನ ಮತ್ತು ಭವನದ ದಾಖಲೆ ಪತ್ರಗಳ ಕೊರತೆ ಇತ್ತು. ಈಗ ಎಲ್ಲವೂ ಸರಿಹೋಗಿದೆ. ಈಗಾಗಲೇ ಭವನ ನಿರ್ಮಾಣಕ್ಕೆ ಬಿಡುಗಡೆಯಾದ 45 ಲಕ್ಷ ರೂ. ಅನುದಾನ ಜಿಲ್ಲಾಧಿಕಾರಿಗಳ ಖಾತೆಯಲ್ಲಿದೆ. ಆದ್ದರಿಂದ ಕೂಡಲೇ ಕಾಮಗಾರಿ ಪ್ರಾರಂಭಿಸಿ ಕನ್ನಡ ಭವನದ ಕನಸು ಈಡೇರಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷ ಕಾಶಿನಾಥ ಗುತ್ತೇದಾರ ಆಗ್ರಹಿಸಿದರು. ನಿಕಟಪೂರ್ವ ಅಧ್ಯಕ್ಷ ನಾಗಯ್ಯಸ್ವಾಮಿ ಅಲ್ಲೂರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next