Advertisement

ಚಿತ್ತಾಪುರ: ಗ್ರಾಮಸ್ಥರಿಂದ ಕುಡಿಯುವ ನೀರಿಗಾಗಿ ಖಾಲಿ ಕೊಡಗಳ ಪ್ರದರ್ಶನ

02:43 PM Feb 23, 2024 | Team Udayavani |

ವಾಡಿ: ಚಿತ್ತಾಪುರ ಮೀಸಲು ಮತಕ್ಷೇತ್ರದ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಬಗೆಲೆದ್ದಿದ್ದು ಗ್ರಾಮಸ್ಥರು ಖಾಲಿ ಕೊಡೆಗಳ ಪ್ರದರ್ಶನ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಎಸ್ ಯುಸಿಐ) ಪಕ್ಷದ ನೇತೃತ್ವದಲ್ಲಿ ಶುಕ್ರವಾರ ಹಳಕರ್ಟಿ ಗ್ರಾಮದ ನೂರಾರು ಜನ ಮಹಿಳೆಯರು ಗ್ರಾಮ ಪಂಚಾಯಿತಿ ಕಚೇರಿಗೆ ಆಗಮಿಸಿ ಕುಡಿಯುವ ನೀರು, ಶೌಚಾಲಯ, ಚರಂಡಿ ಸ್ವಚ್ಛತೆ ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿದರು. ಗ್ರಾಪಂ ಪಿಡಿಒ ಹಾಗೂ ಜನಪ್ರತಿನಿಧಿಗಳ ವಿರುದ್ಧ ಧಿಕ್ಕಾರದ ಘೋಷಣೆ ಮೊಳಗಿಸಿದರು.

ಎಸ್ ಯುಸಿಐ ಜಿಲ್ಲಾ ಸಮಿತಿ ಸದಸ್ಯ ಕಾಮ್ರೇಡ್ ವೀರಭದ್ರಪ್ಪ ಆರ್.ಕೆ ಮಾತನಾಡಿ, ಹಳಕರ್ಟಿ ಗ್ರಾಮಕ್ಕೆ ಚರಂಡಿ ರೂಪದ ಕೊಳೆ ನೀರು ಸರಬರಾಜು ಮಾಡಲಾಗುತ್ತಿದೆ. ಶುದ್ಧ ನೀರು ಕೊಡಲಾಗದೆ ಪಂಚಾಯಿತಿ ಆಡಳಿತ ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿದೆ. ಚರಂಡಿಗಳು ಗಬ್ಬೆದ್ದು ನಾರುತಿದ್ದರೂ ಕೇಳೋರಿಲ್ಲ. ಚರಂಡಿಯೊಳಗೆ ಹಾಕಲಾದ ಕುಡಿಯುವ ನೀರಿನ ಪೈಪ್ ಗೋಳು ಒಡೆದು ಕೊಳೆ ಸರಬರಾಜು ಆಗುತ್ತಿದ್ದರೂ ಅಧಿಕಾರಿಗಳು ಜವಾಬ್ದಾರಿ ಮರೆತು ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೆ ಹಳಕರ್ಟಿ ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ಕೊಡಲು ಕ್ರಮಕೈಗೊಳ್ಳಲು ಮುಂದಾಗದಿದ್ದರೆ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಎಸ್ ಯುಸಿಐ ಮುಖಂಡರಾದ ಶಿವುಕುಮಾರ ಆಂದೋಲಾ, ಗೌತಮ ಪರ್ತೂರ, ಈರಣ್ಣ ಇಸಬಾ, ವೆಂಕಟೇಶ ದೇವದುರ್ಗ, ಗೋವಿಂದ ಯಳವಾರ ಸೇರಿದಂತೆ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next