Advertisement

ಕೆರೆಗಳ ನೀರು ಹಳದಿ ಬಣ್ಣಕ್ಕೆ

12:15 PM Feb 23, 2020 | Naveen |

ಚಿತ್ತಾಪುರ: ತಾಲೂಕಿನಾದ್ಯಂತ ಗ್ರಾಮೀಣ ಪ್ರದೇಶಗಳಲ್ಲಿ ಕಲುಷಿತ ನೀರು ಕುಡಿಯುವುದರಿಂದ ಜನರ ಆರೋಗ್ಯ ಹದಗೆಡುತ್ತಿದ್ದು, ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ವಹಿಸುತ್ತಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ನದಿ ಹಾಗೂ ನಾಲೆಗಳಿಂದ ನೀರು ತುಂಬಿಕೊಂಡ ಕುಡಿಯುವ ನೀರಿನ ಕೆರೆಗಳು ತಳಕಂಡ ಹಿನ್ನೆಲೆಯಲ್ಲಿ ನೀರು ಹಳದಿ ಬಣ್ಣಕ್ಕೆ ತಿರುಗಿದೆ. ಗ್ರಾಮ ಪಂಚಾಯಿತಿಗಳ ಅಸಮರ್ಪಕ ನಿರ್ವಹಣೆಯೇ ಇದಕ್ಕೆ ಕಾರಣವಾಗಿದೆ. ಅಂತರ್ಜಲ ಬತ್ತುತ್ತಿರುವ ಕಾರಣ ಬೋರ್‌ವೆಲ್‌ಗ‌ಳಲ್ಲಿ ಪ್ಲೋರೈಡ್‌, ಆರ್ಸೆನಿಕ್‌ಯುಕ್ತ ನೀರು ಬರುತ್ತಿದೆ. ಕೆಲವೆಡೆ ಶುದ್ಧ ಕುಡಿಯುವ ನೀರಿನ ಘಟಕಗಳಿಲ್ಲ. ಇದ್ದರೂ ಘಟಕಗಳಿಗೆ ನೀರಿನ ಕೊರತೆ ಉಂಟಾದ ಪರಿಣಾಮ ಅನಿವಾರ್ಯವಾಗಿ ಕಲುಷಿತ ನೀರನ್ನೇ ಗ್ರಾಮಸ್ಥರು ಕುಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಸಣ್ಣಪುಟ್ಟ ಕೆರೆಗಳನ್ನು ಅವಲಂಬಿಸಿದ ಜನರ ಪರಿಸ್ಥಿತಿ ಗಂಭೀರವಾಗಿದೆ. ಕಲುಷಿತ ನೀರಿನಿಂದಾಗಿ ಚರ್ಮದ ಮೇಲೆ ಗುಳ್ಳೆಗಳು ಏಳುತ್ತಿವೆ. ತಲೆನೋವು, ಕೈಕಾಲು ನೋವು, ತಲೆಸುತ್ತು,
ನಿಶಕ್ತಿ, ವಾಂತಿ, ಭೇದಿಯಾಗಿ ಮಕ್ಕಳು, ಯುವಕರು, ಹಿರಿಯ ನಾಗರಿಕರು, ಮಹಿಳೆಯರು ಸುಸ್ತಾಗುತ್ತಿದ್ದಾರೆ.

ಪ್ರತಿನಿತ್ಯ ನೂರಾರು ಜನರು ಪಟ್ಟಣದ ಸರ್ಕಾರಿ, ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ದಾಖಲಾಗುತ್ತಿದ್ದಾರೆ. ಹೀಗಿದ್ದರೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮುನ್ನೆಚ್ಚರಿಕೆ ಮೂಡಿಸಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.

ಬೇಸಿಗೆ ಕಾಲದಲ್ಲಿ ನೀರಿನ ಅಭಾವದಿಂದ ಮತ್ತು ಹೆಚ್ಚು ಬಿಸಿಲಿನಿಂದ ನಿತ್ಯ ನೂರಾರು ಜನರು ಹಾಸಿಗೆ ಹಿಡಿದರೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂಜಾಗೃತಾ ಕ್ರಮ ಕೈಗೊಳ್ಳದೇ ನಿರಾಸಕ್ತಿ ತೋರಿಸುತ್ತಿದೆ. ಕಳೆದ ಡಿಸೆಂಬರ್‌ ತಿಂಗಳಿನಲ್ಲಿ ತಾಲೂಕಿನ ಮೋಗಲಾ ಗ್ರಾಮದಲ್ಲಿ ವಾಂತಿ ಭೇದಿ ಕಾಣಿಸಿಕೊಂಡು 36 ಜನರು ಚಿಕಿತ್ಸೆ ಪಡೆದಿದ್ದರು. ಇದೀಗ ತಾಲೂಕಿನ ಅಲ್ಲೂರ (ಬಿ) ಗ್ರಾಮದಲ್ಲಿ 60ಕ್ಕೂ ಹೆಚ್ಚು ಜನರಿಗೆ ವಾಂತಿ-ಭೇದಿ ಹರಡಿದೆ. ಸಕಾಲಕ್ಕೆ ಚಿಕಿತ್ಸೆ ಸಿಗದ ಕಾರಣ ಗರ್ಭಿಣಿಯೊಬ್ಬರು ಮೃತಪಟ್ಟಿದ್ದರಿಂದ ಗ್ರಾಮಸ್ಥರು ಆರೋಗ್ಯ ಇಲಾಖೆ ಅ ಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

Advertisement

ಕಲುಷಿತ ನೀರು ಕುಡಿಯುವ ಪ್ರದೇಶಗಳಿಗೆ ಭೇಟಿ ನೀಡಿ, ನೀರು
ಶುದ್ಧೀಕರಿಸುವ ಮಾತ್ರೆ ವಿತರಿಸುತ್ತಿಲ್ಲ. ಅಶುದ್ಧ ನೀರನ್ನು ಶುದ್ಧೀಕರಿಸಿಕೊಳ್ಳುವ ಬಗೆ, ಬೇಸಿಗೆ ಹಾಗೂ ಮಳೆಗಾಲದ ಸಂದರ್ಭದಲ್ಲಿ ಆರೋಗ್ಯ ಕಾಪಾಡಿಕೊಳ್ಳುವ ಕುರಿತು ಜಾಗೃತಿ ಮೂಡಿಸುತ್ತಿಲ್ಲ. ಎನ್‌ಆರ್‌ಎಚ್‌ಎಂ ಯೋಜನೆ ಕಾರ್ಯಕ್ರಮಗಳು ಹಳ್ಳಿಗಳಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ.

ಅಲ್ಲೂರ್‌ (ಬಿ) ಗ್ರಾಮದಲ್ಲಿ ಜನರು ಕುಡಿಯುವ ನೀರು ಪಡೆಯುವ ಗುಮ್ಮಿಯ ಹತ್ತಿರ ಪರಿಸರ ನೈರ್ಮಲ್ಯ ಹದಗೆಟ್ಟಿದೆ. ಕೊಳಚೆ ನೀರು ನಿಂತು ದುರ್ವಾಸನೆ ಹರಡುತ್ತಿದೆ. ಅದೇ ಸ್ಥಳದಿಂದ ಜನರು ತಮ್ಮ ಮನೆಗಳಿಗೆ ಕುಡಿಯುವ ನೀರು ತೆಗೆದುಕೊಂಡು ಹೋಗುತ್ತಿದ್ದಾರೆ. ಯಾರೂ ಇಲ್ಲಿನ ಪರಿಸರ ಸ್ವಚ್ಛತೆಗೆ ಗಮನ ಹರಿಸುತ್ತಿಲ್ಲ.
 ಬಸವರಾಜ ತಳವಾರ, ಅಲ್ಲೂರ್‌ (ಬಿ)

ಕಳೆದ ವರ್ಷ ಮಳೆ ಕೈಕೊಟ್ಟಿದ್ದರಿಂದ ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಹೀಗಾಗಿ ನಿಂತ ಕಲುಷಿತ ನೀರು ಕುಡಿದ ಜನರು ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ. ಇಷ್ಟೆಲ್ಲ ಆದರೂ ಆರೋಗ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ.
ಮಲ್ಲಿಕಾರ್ಜುನ ಅಲ್ಲೂರಕರ್‌,
ಕರವೇ ತಾಲೂಕು ಅಧ್ಯಕ್ಷ

ಗ್ರಾಮೀಣ ಪ್ರದೇಶದಲ್ಲಿ ಜನರ ಆರೋಗ್ಯ ಕಾಪಾಡಲು ಆಶಾ ಕಾರ್ಯಕರ್ತೆಯರನ್ನು ನೇಮಿಸಲಾಗಿದೆ. ಗ್ರಾಮದಲ್ಲಿನ ಮಲೀನ ವಾತಾವರಣ ಸ್ವಚ್ಛಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಕಲುಷಿತ ನೀರಿನಿಂದ ಅನಾರೋಗ್ಯ ಉಂಟಾಗುತ್ತಿರುವುದನ್ನು ತಡೆಯಲು ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ.
ಡಾ| ಗಜಲಖೇಡ, ಕಾಲರಾ
ನಿಯಂತ್ರಣ ವೈದ್ಯಾಧಿ ಕಾರಿ,
ಆರೋಗ್ಯ ಇಲಾಖೆ

„ಎಂ.ಡಿ. ಮಶಾಖ

Advertisement

Udayavani is now on Telegram. Click here to join our channel and stay updated with the latest news.

Next