Advertisement
ವಿಕ್ಟೋರಿಯಾ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ (ಟ್ರಾಮಾ ಆ್ಯಂಡ್ ಎಮರ್ಜೆನ್ಸಿ ಕೇರ್ ಸೆಂಟರ್) ಕಾಲರಾ ದೃಢಪಟ್ಟ ಇಬ್ಬರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಹ್ಯಾಂಗಿಗ್ ಡ್ರಾಪ್ ಮಾದರಿಯ ಪರೀಕ್ಷೆಯಲ್ಲಿ ಮತ್ತೋರ್ವ ವಿದ್ಯಾರ್ಥಿನಿಗೂ ಕಾಲರಾ ಪಾಸಿಟಿವ್ ಬಂದಿದ್ದು, ಆಕೆಗೂ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.
Related Articles
ಪ್ರಕರಣಗಳಿಗೆ ಸಂಬಂಧಿಸಿ ಬಿಬಿಎಂಪಿಗೆ ಮಾಹಿತಿ ನೀಡಲಾಗಿದೆ. ಹಾಸ್ಟೆಲ್‌ನಲ್ಲಿ ಯಾವುದೇ ಸಮಸ್ಯೆಗಳ ಬಗ್ಗೆ ವಾರ್ಡನ್ ಅಥವಾ ವಿದ್ಯಾರ್ಥಿನಿಯರು ತಮ್ಮ ಗಮನಕ್ಕೆ ತಂದಿಲ್ಲ ಎಂದು ಬೆಂಗಳೂರು ಮೆಡಿಕಲ್ ಕಾಲೇಜಿನ ಡೀನ್ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಮನಕ್ಕೆ ತಂದಿದ್ದಾರೆ. ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಲೇಡಿಸ್ ಹಾಸ್ಟೆಲ್ ವಾರ್ಡನ್ ಡಾ| ಅಖೀಲಾಂಡೇಶ್ವರಿ ಅವರನ್ನು ಅಮಾನತುಗೊಳಿಸಲಾಗಿದೆ. ಇನ್ನು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಬೆನ್ನಲ್ಲೇ ಬೆಂಗಳೂರು ಮೆಡಿಕಲ್ ಕಾಲೇಜು ಆಡಳಿತ ಮಂಡಳಿಯು ಹಾಸ್ಟೆಲ್‌ನ ಕುಡಿಯುವ ನೀರನ್ನು ಪರಿಶೀಲಿಸಲು ಸೂಚಿಸಿದೆ ಎಂದು ತಿಳಿದು ಬಂದಿದೆ.
Advertisement
ಅಡುಗೆ ಮನೆ ಸೀಲ್ಡೌನ್ಬೆಂಗಳೂರು ವೈದ್ಯಕೀಯ ಕಾಲೇಜು ಡೀನ್ ಡಾ| ರಮೇಶ್ ಕೃಷ್ಣ ಸುದ್ದಿಗಾರರೊಂದಿಗೆ ಮಾತನಾಡಿ, ಈಗ ಹಾಸ್ಟೆಲ್ ವ್ಯವಸ್ಥೆ ಚೆನ್ನಾಗಿದ್ದು, ನಾನು ಕೂಡ ಹಾಸ್ಟೆಲ್‌ಗೆ ಹೋಗಿ ಪರಿಶೀಲಿಸಿದ್ದೇನೆ. ಹಾಸ್ಟೆಲ್‌ನಲ್ಲಿ ಉಳಿದವರಿಗೆ ಯಾವುದೇ ಗುಣಲಕ್ಷಣಗಳು ಇಲ್ಲ. ಹಾಸ್ಟೆಲ್ ಅಡುಗೆ ಮನೆಯನ್ನು ಸೀಲ್‌ಡೌನ್ ಮಾಡಲಾಗಿದೆ. ಬೆಂಗಳೂರು ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಸುಮಾರು 800 ವಿದ್ಯಾರ್ಥಿಗಳಿದ್ದಾರೆ. ಒಟ್ಟು 2 ಹಾಸ್ಟೆಲ್ ಇದೆ. ನೀರಿನಿಂದ ಸಮಸ್ಯೆ ಉಂಟಾಗಿದ್ದರೆ ಎಲ್ಲ ವಿದ್ಯಾರ್ಥಿಗಳಿಗೂ ಸೋಂಕು ತಗುಲಬೇಕಿತ್ತು. ಆದರೆ ಕೇವಲ 47 ವಿದ್ಯಾರ್ಥಿಗಳು ಮಾತ್ರ ಅಸ್ವಸ್ಥಗೊಂಡಿದ್ದಾರೆ. ಆಹಾರದಿಂದ ಸಮಸ್ಯೆ ಉಂಟಾಗಿರಬಹುದು ಎಂದು ಶಂಕಿಸಲಾಗಿದೆ ಎಂದರು.