Advertisement

ಉಪಸಭಾಪತಿಯಾಗಿ ಧರ್ಮೇಗೌಡ ಆಯ್ಕೆ

08:47 AM Dec 19, 2018 | |

ಸುವರ್ಣಸೌಧ: ವಿಧಾನಪರಿಷತ್‌ ಉಪಸಭಾಪತಿ ಸ್ಥಾನಕ್ಕೆ ಜೆಡಿಎಸ್‌ನ ಎಸ್‌.ಎಲ್‌.ಧರ್ಮೇಗೌಡ ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಶ್ರೀಕಂಠೇ ಗೌಡರಿಗೆ ಉಪ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಪಕ್ಷದ ವರಿಷ್ಠರು ಸೂಚನೆ ನೀಡಿದ್ದರಾದರೂ ಸಭಾಪತಿ ಸ್ಥಾನದಂತೆ ಉಪ ಸಭಾಪತಿ ಸ್ಥಾನಕ್ಕೂ ಕೊನೇ ಕ್ಷಣದಲ್ಲಿ ಅಚ್ಚರಿ ಅಭ್ಯರ್ಥಿಯಾಗಿ ಧರ್ಮೇಗೌಡ ನಾಮಪತ್ರ ಸಲ್ಲಿಸಿದರು. 

Advertisement

ಹಿರಿಯ ನಾಯಕ ಬಸವರಾಜ ಹೊರಟ್ಟಿ ಸೇರಿ ಪಕ್ಷದ ನಾಯಕರ ಜತೆ ಎಸ್‌.ಎಲ್‌.ಧರ್ಮೇಗೌಡ ವಿಧಾನ ಪರಿಷತ್‌ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು. ಬುಧವಾರ ಚುನಾವಣೆ ನಿಗದಿಯಾಗಿತ್ತು. ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅವಿರೋಧವಾಗಿ ಆಯ್ಕೆಯಾದಂತಾಗಿದೆ. ಮಲೆನಾಡು ಭಾಗಕ್ಕೆ ಸಂಪುಟದಲ್ಲಿ ಅವಕಾಶವಿಲ್ಲದ ಕಾರಣ ಧರ್ಮೇ ಗೌಡರಿಗೆ ಉಪ ಸಭಾಪತಿ ಸ್ಥಾನ ಕಲ್ಪಿಸಲಾಗಿದೆ ಎಂದು ಹೇಳಲಾಗಿದೆ.

ಬೀರೂರು ಕ್ಷೇತ್ರದಿಂದ ಒಂದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಧರ್ಮೇಗೌಡ ಇತೀ¤ಚೆಗೆ ವಿಧಾನ ಸಭೆಯಿಂದ ವಿಧಾನಪರಿಷತ್‌ಗೆ ಆಯ್ಕೆ ಯಾಗಿದ್ದರು. ಇವರ ಸಹೋದರ ಭೋಜೇಗೌಡ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಪರಿಷತ್‌ಗೆ ಆಯ್ಕೆಯಾಗಿದ್ದಾರೆ. ಈ ಮಧ್ಯೆ, ವಿಧಾನಪರಿಷತ್‌ನಲ್ಲಿ ಸರ್ಕಾರದ ಮುಖ್ಯ ಸಚೇತಕ ಸ್ಥಾನವೂ ಜೆಡಿಎಸ್‌ಗೆ ನೀಡಲಾಗುವುದು ಎಂದು ಹೇಳಲಾಗಿದ್ದು ಟಿ.ಎ.ಶರವಣ ಹಾಗೂ ತೂಪಲ್ಲಿ ನಾರಾಯಣಸ್ವಾಮಿ ಹೆಸರು ಪರಿಶೀಲನೆಯಲ್ಲಿದೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next