Advertisement

ಮಹಾ ಸಿಎಂ ದೇವೇಂದ್ರ ಫಡ್ನವೀಸ್ ಹೆಲಿಕಾಪ್ಟರ್ ಅಪಘಾತ; ಅಪಾಯದಿಂದ ಪಾರು

12:34 PM May 25, 2017 | Sharanya Alva |

ಮಹಾರಾಷ್ಟ್ರ: ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಾತೂರ್ ನಲ್ಲಿ ಟೇಕಾಫ್ ಆಗುತ್ತಿದ್ದ ವೇಳೆ ಅಪಘಾತಕ್ಕೀಡಾಗಿ ನೆಲಕ್ಕಪ್ಪಳಿಸಿದ ಘಟನೆ ಗುರುವಾರ ನಡೆದಿದ್ದು, ಫಡ್ನವೀಸ್ ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಎಎನ್ ಐ ವರದಿ ತಿಳಿಸಿದೆ.

Advertisement

ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ತುರ್ತು ಅಪಘಾತಕ್ಕೀಡಾದ ವರದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ, ನಾನು ಹಾಗೂ ನಮ್ಮ ತಂಡ ಸುರಕ್ಷಿತವಾಗಿದ್ದೇವೆ ಎಂದು ಸಿಎಂ ಫಡ್ನವೀಸ್ ಅವರು ಟ್ವೀಟ್ ಮಾಡಿದ್ದಾರೆ.

ನಮ್ಮ ಹೆಲಿಕಾಪ್ಟರ್ ಲಾತೂರ್ ನಲ್ಲಿ ತಾಂತ್ರಿಕ ದೋಷದಿಂದ ಲ್ಯಾಂಡ್ ಆಗುವ ವೇಳೆ ಅಪಘಾತಕ್ಕೀಡಾಗಿದೆ. ಆದರೆ ನಾನು ಮತ್ತು ನಮ್ಮ ತಂಡ ಸಂಪೂರ್ಣವಾಗಿ ಅಪಾಯದಿಂದ ಪಾರಾಗಿದ್ದೇವೆ. ಯಾವುದೇ ಆತಂಕ ಬೇಡ ಎಂದು ಟ್ವೀಟ್ ನಲ್ಲಿ ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next